Advertisement
ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನವಿಡೀ ಸಭೆಗಳನ್ನು ನಡೆಸಿ ಜಿಲ್ಲೆಯ ಬಗ್ಗೆ ಒಂದಷ್ಟು ಮಾಹಿತಿ ಕಲೆ ಹಾಕಿದರು. ವಿದ್ಯಾರ್ಥಿನಿಲಯಗಳ ಕಾರ್ಯ ವೈಖರಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಪರಿಶೀಲನೆಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಸಂಜೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.
Related Articles
Advertisement
ದೇಶದ ಆಸ್ತಿಗಳಾಗಿ: ಸರ್ಕಾರವು ಹಿಂದುಳಿದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ನೀಡಲಾಗುತ್ತಿರುವ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಪ್ರೋತ್ಸಾಹ ಧನ, ವಿದ್ಯಾರ್ಥಿವೇತನ ಮುಂತಾದ ಸೌಲಭ್ಯ ಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು, ಜವಾಬ್ದಾರಿಯುತ ಪ್ರಜೆಗಳಾಗಿ, ದೇಶದ ಆಸ್ತಿಗಳಾಗಿ ಹೊರಹೊಮ್ಮುವಂತಾಗಬೇಕು ಎಂದು ಕಿವಿಮಾತು ಹೇಳಿದರು.
ಸದೃಢ ಸಮಾಜದ ನಿರ್ಮಾಣ: ವಿದ್ಯಾರ್ಥಿಗಳು ಕೇವಲ ಹೆಚ್ಚು ಅಂಕಗಳನ್ನು ಗಳಿಸುವುದಲ್ಲದೆ, ಸಮಾಜದ ವಿವಿಧ ಕ್ಷೇತ್ರಗಳ ಬಗ್ಗೆ ಹೆಚ್ಚಿನ ಜ್ಞಾನ ಸಂಪಾದಿಸುವುದು ಅತಿ ಮುಖ್ಯ. ತಮ್ಮ ವಿದ್ಯಾ ಭ್ಯಾಸದ ನಂತರ ಔದ್ಯೋಗಿಕ ಕ್ಷೇತ್ರದಲ್ಲಿ ತಮ್ಮದೇ ಆದ ಚಾಪನ್ನು ಮೂಡಿಸಲು ಮತ್ತು ಉತ್ತಮಉದ್ಯೋಗಾವಕಾಶ ಪಡೆದುಕೊಳ್ಳಲು ಪ್ರಸ್ತುತ ಕಾಲಘಟ್ಟದಲ್ಲಿ ಇದು ಅವಶ್ಯಕವಾಗಿದೆ. ಆ ಮೂಲಕ ತಂದೆ ತಾಯಿಗೆ ಕೀರ್ತಿ ತರುವುದರೊಂದಿಗೆ ಸದೃಢ ಸಮಾಜ ನಿರ್ಮಾಣಕ್ಕೆ ಕಾರಣೀ ಭೂತರಾಗಲು ವಿದ್ಯಾರ್ಥಿಗಳಿಗೆ ಮನವಿ ಮಾಡಿದರು. ಸ್ವಚ್ಛತೆ ಬಗ್ಗೆ ಇಲಾಖೆಯ ಸಿಬ್ಬಂದಿ ಪ್ರಶಂಸೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಉತ್ತಮ ನಿರ್ವಹಣೆ ಬಗ್ಗೆ ಮತ್ತು ನಿಲಯಗಳಲ್ಲಿ ಒದಗಿಸಲಾಗಿರುವ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಸೋಲಾರ್ ಬಿಸಿ ನೀರಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ನಿಲಯದಲ್ಲಿನ ಸ್ವತ್ಛತೆ ಬಗ್ಗೆ ಇಲಾಖೆಯ ಸಿಬ್ಬಂದಿ ಪ್ರಶಂಸಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಡಾ.ಅಶೋಕ್, ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.