Advertisement

ಚನ್ನಮ್ಮ ವಸತಿ ಶಾಲೆಗೆ ಡಿಸಿ ಭೇಟಿ

02:52 PM Nov 03, 2021 | Team Udayavani |

ಯಾದಗಿರಿ: ತಾಲೂಕಿನ ಮುಂಡರಗಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

Advertisement

ಕಿತ್ತೂರು ಚನ್ನಮ್ಮ ವಸತಿ ಶಾಲೆಯಲ್ಲಿರುವ ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಿ ಯೋಗಕ್ಷೇಮ ವಿಚಾರಿಸಿದರು. ಅವರಿಗೆ ಅಡುಗೆ ತಯಾರಿಸಿ ಕೊಡುವ ಕೋಣೆಗಳು ಮತ್ತು ದಾಸ್ತಾನು ಕೊಠಡಿಗಳಿಗೆ ಭೇಟಿ ನೀಡಿ ವೀಕ್ಷಿಸಿದರು.

ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಊಟ ಮಾಡಿದ ಅವರು, ಮಕ್ಕಳಿಗೆ ನೀಡುವ ಆಹಾರ ವಿತರಣೆಯಲ್ಲಿ ಕೊರತೆಯಾಗಂತೆ ಮೆನು ಪ್ರಕಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿ, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಎಲ್ಲ ಕೋಣೆಗಳ ಸ್ವಚ್ಛತೆಗೆ ಆದ್ಯತೆ ನೀಡಿ ಶೌಚಾಲಯ, ಕುಡಿವ ನೀರು, ಅಗತ್ಯ ಮೂಲ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ವಿಳಂಬವಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಸಮಾಜ ಇಲಾಖೆ ಕಲ್ಯಾಣಾಧಿಕಾರಿ ಚೆನ್ನಬಸವ ಎಸ್‌, ಯಾದಗಿರಿ ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ರಾಜು ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next