ಯಳಂದೂರು: ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಕೋವಿ ಡ್ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಚಾರುಲತಾಸೋಮಲ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಪಟ್ಟಣದ ಪೌರ ಕಾರ್ಮಿಕರ ಕಾಲೋನಿತಾಲೂಕಿನ ಮದ್ದೂರು, ಮಾಂಬಳ್ಳಿ ಹಾಗೂಅಗರ ಗ್ರಾಮದ ಕೋವಿಡ್ ಪೀಡಿತ ಮನೆಗಳಿಗೆ ಭೇಟಿ ನೀಡಿದರು. ಈ ವೇಳೆ ಸೋಂಕಿತರಸಂಬಂಧಿಗಳು ಕಡ್ಡಾಯವಾಗಿ ಕೋವಿಡ್‌ಪರೀಕ್ಷೆ ಮಾಡಿಸಿಕೊಳ್ಳಬೇಕು. ಅಲ್ಲದೆನೆರೆಹೊರೆಯವರು ಹಾಗೂ ಇವರ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಈ ಬಗ್ಗೆ ಆಶಾ,ಅಂಗನವಾಡಿ ಹಾಗೂ ಆರೋಗ್ಯ ಸಿಬ್ಬಂದಿ ಸೂಕ್ತಮಾಹಿತಿ ಕಲೆ ಹಾಕಿ ಕಡ್ಡಾಯವಾಗಿ ಕೋವಿಡ್‌ಪರೀಕ್ಷೆ ಮಾಡಿಸುವಂತೆ ಮನವೊಲಿಸಬೇಕು ಎಂದು ಸೂಚನೆ ನೀಡಿದರು.
ರೋಗ ಬಾಧಿತ ಮನೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿಮಾಹಿತಿ ಕಲೆ ಹಾಕಿ ಸ್ಯಾನಿಟೈಸ್ ಮಾಡಬೇಕು.ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು.ಸಾರ್ವಜನಿಕರೂ ಇಂತಹ ಸಂದರ್ಭದಲ್ಲಿಇಲಾಖೆ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ತಹಶೀಲ್ದಾರ್ ವೈ.ಎಂ. ನಂಜಯ್ಯ,ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್, ಇಒ ಉಮೇಶ್, ಪಪಂ ಮುಖ್ಯಾಧಿಕಾರಿ ಇತರರಿದ್ದರು.
ಜಿಲ್ಲಾಧಿಕಾರಿಗಳು ಬಂದು ಹೋದ ನಂತರ ಪಟ್ಟಣದ ಪೌರ ಕಾರ್ಮಿಕರ ಕಾಲೋನಿಯಲ್ಲಿಕೋವಿಡ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿಅಲ್ಲಿರುವ ಅಕ್ಕಪಕ್ಕದ ಮನೆಯವರಿಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಪರೀಕ್ಷೆ ನಡೆಸಲಾಯಿತು.