ಚಿಕ್ಕಬಳ್ಳಾಪುರ: ಕೊವೀಡ್-19 ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ನಗರದ ಹಳೆ ಜಿಲ್ಲಾಸ್ಪತ್ರೆಯಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಐಸೊಲೇಷನ್ ವಾರ್ಡ್‌ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಗುರುವಾರ ಜಿಲ್ಲಾಧಿಕಾರಿ ಆರ್.ಲತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಬೆಂಗಳೂರಿನ ಅಂತಾರಾಷ್ಟ್ರೀನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ, ಅಧಿಕಾರಿಗಳ ಹಾಗೂ ಕಾರು ಚಾಲಕರ ಮಾಹಿತಿಯನ್ನು ಬೆಂಗಳೂರಿನ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಯ ಅಧಿಕಾರಿಗಳಿಂದ ಮಾಹಿತಿ ಕೇಳಲಾಗಿದ್ದು, ಬಂದ ತಕ್ಷಣ ಆರೋಗ್ಯ ಇಲಾಖೆ ಮತ್ತು ಆಶಾ ಕಾರ್ಯಕರ್ತೆಯರಿಂದ ಆರೋಗ್ಯದ ಬಗ್ಗೆ ತಪಾಸಣೆ ಮಾಡಲಾಗುತ್ತದೆ ಎಂದು ಹೇಳಿ ತಪಾಸಣೆ ಮಾಡುವುದರ ಜೊತೆಗೆ ನಿಗಾ ವಹಿಸಲಾಗುತ್ತದೆ ಎಂದರು.
99 ಜನರು ವಿದೇಶಗಳಿಂದ ಭೇಟಿ: ಜಿಲ್ಲೆಯಾದ್ಯಂತ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಎಲ್ಲಾ ಹಂತಗಳಲ್ಲಿ ಪರಿಣಾಮಕಾರಿ ನಿಯಂತ್ರಣ ವಿಧಾನಗಳನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಗೆ ಫೆಬ್ರವರಿಯಿಂದ ಮಾ.19 ರವರೆಗೆ ವಿದೇಶಗಳಿಂದ 99 ಜನರು ಬಂದಿದ್ದು, ಇದರಲ್ಲಿ ಓರ್ವ ಅಮೆರಿಕಾ ಪ್ರಜೆಯಾಗಿರುತ್ತಾರೆಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಎಲ್ಲಾ ಪ್ರಯಾಣಿಕರು ಗೃಹ ನಿರ್ಬಂಧನದಲ್ಲಿದ್ದು, ಪ್ರತಿ ದಿನ ಕ್ಷೇತ್ರ ಆರೋಗ್ಯ ಸಿಬ್ಬಂದಿ ಇವರ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಸಮಗ್ರ ಕಾರ್ಯಾಚರಣೆ ಜಾರಿ: 70 ಜನರನ್ನು 14 ದಿನಗಳೊಳಗಿನ ಕೊರೆಂಟೈನ್ ತಪಾಸಣೆ ಪಡೆಯುತ್ತಿದ್ದಾರೆ. ಇನ್ನುಳಿದ 14 ಜನರು 14 ದಿನಗಳ ಅವಧಿಯನ್ನು ಪೂರ್ಣಗೊಳಿಸಿದ್ದು 16 ಜನರು 28 ದಿನಗಳ ಐಸೊಲೇಷನ್ ಅವಧಿ ಪೂರ್ಣಗೊಳಿಸಿದ್ದಾರೆ. 99 ಜನರ ಪೈಕಿ 29 ಜನರು ಹೋಂ ಐಸೊಲೇಷನ್ ಪೂರ್ಣಗೊಳಿಸಿದ್ದಾರೆ. ಉಳಿದ 70 ಜನರಿಗೆ ಪ್ರತ್ಯೇಕ ಕೊಠಡಿಗಳಲ್ಲಿರಿಸಿ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ವಿದೇಶಗಳಿಂದ ಬಂದ ಪ್ರಯಾಣಿಕರ ಹಾಗೂ ಶಂಕಿತ ಪ್ರಕರಣಗಳ ಬಗ್ಗೆ ಸಮಗ್ರ ಕಾರ್ಯಾಚರಣೆ ಜಾರಿಯಲ್ಲಿರುತ್ತದೆ ಎಂದರು.