ಕೊಳ್ಳೇಗಾಲ: ಕಾವೇರಿ ಪ್ರವಾಹಕ್ಕೆ ಸಿಲುಕಿದ್ದು, ಪುನರ್‌ವಸತಿ ಕೇಂದ್ರದಲ್ಲಿರುವ ಗ್ರಾಮಸ್ಥರನ್ನು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಕಾವೇರಿ ನದಿ ನೀರು ಇಳಿಮುಖವಾಗಿದ್ದು, ನಮ್ಮ ಸ್ವಗ್ರಾಮಗಳಿಗೆ ಕಳುಹಿಸಿಕೊಡಬೇಕು ಮತ್ತು ಮಳೆಹಾನಿ, ಬೆಳೆಹಾನಿಗೆ ಸೂಕ್ತ ಪರಿಹಾರ ಕೊಡಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡಿ, ಈಗಾಗಲೇ ಕಾವೇರಿ ನೀರು ಇಳಿಮುಖವಾಗಿದೆ. ಕೂಡಲೇ ಅಧಿಕಾರಿಗಳ ತಂಡ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತಿದ್ದಂತೆ ಸುರಕ್ಷಿತವಾಗಿ ಕಳುಹಿಸಿಕೊಡಲಾಗುವುದೆಂದು ಭರವಸೆ ನೀಡಿದರು.
ಮತ್ತೂಂದು ಅಧಿಕಾರಿಗಳ ತಂಡ ಮಳೆ ಹಾನಿಗೆ ಉಂಟಾಗಿರುವ ಸಮೀಕ್ಷೆ ನಡೆಯುತ್ತಿದೆ. ಎಲ್ಲರಿಗೂ ಪರಿಹಾರವನ್ನು ದೊರಕಿಸಿಕೊಡುವ ಭರವಸೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ್‌ಕುಮಾರ್, ಉಪ ವಿಭಾಗಾಧಿಕಾರಿ ನಿಖಿತಾ.ಎಂ.ಚಿನ್ನಸ್ವಾಮಿ, ತಹಶೀಲ್ದಾರ್ ಕೆ.ಕುನಾಲ್, ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಕೆ.ಸುರೇಶ್, ಜಿಲ್ಲಾ ಆಹಾರ ನಿರೀಕ್ಷಕ ರಾಚಪ್ಪ, ಡಿವೈಎಸ್ಪಿ ನವೀನ್‌ಕುಮಾರ್, ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀಕಾಂತ್, ಎಸೈ ರಾಜೇಂದ್ರ ಇದ್ದರು.