Advertisement

ಕೋವಿಡ್‌ ಕೇರ್‌ ಸೆಂಟರ್‌ಗೆ ಡೀಸಿ ಭೇಟಿ

04:27 PM Apr 24, 2021 | Team Udayavani |

ಕೆ.ಆರ್‌.ಪೇಟೆ: ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿರುವಸೋಂಕಿತರೊಂದಿಗೆ ಸಂವಾದ ನಡೆಸಿದ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರು ಚಿಕಿತ್ಸಾ ಕೇಂದ್ರದಲ್ಲಿರೋಗಿಗಳಿಗೆ ದೊರೆಯುತ್ತಿರುವ ವೈದ್ಯಕೀಯ ಆರೈಕೆ, ಆಹಾರ ಮತ್ತು ವಸತಿಯ ಬಗ್ಗೆ ಮಾಹಿತಿ ಪಡೆದುಕೊಂಡರು.

Advertisement

ಕೆ.ಆರ್‌.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮಸಾರ್ವಜನಿಕ ಆಸ್ಪತ್ರೆ ಮತ್ತು ಹೊಸಹೊಳಲುಚಿಕ್ಕಕೆರೆಯ ಕೋಡಿಯ ಬಳಿಯ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಸ್ಥಾಪಿಸಿರುವ ಕೋವಿಡ್‌ಕೇರ್‌ ಸೆಂಟರ್‌ಗೆ ಭೇಟಿ ನೀಡಿ ಅವಲೋಕನ ನಡೆಸಿದರು.

ಕೋವಿಡ್‌ 2ನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತಗಳು ಭರದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿವೆ. ಪ್ರಸ್ತುತ ಸೋಂಕು ಪತ್ತೆಯಾಗಿರುವ 58 ಜನರನ್ನು ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಸ್ಥಾಪಿಸಿರುವ ಕೊರೊನಾ ಕೇರ್‌ಸೆಂಟರ್‌ನಲ್ಲಿ ಚಿಕಿತ್ಸೆ ಹಾಗೂ ಆಹಾರ ನೀಡಿ ಗುಣಪಡಿಸಲಾಗುತ್ತಿದೆ. ಎಲ್ಲರೂಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಹಶೀಲ್ದಾರ್‌ಎಂ.ಶಿವಮೂರ್ತಿ, ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

ಕೋವಿಡ್‌ ಕೇರ್‌ ಸೆಂಟರ್‌: ಕೆ.ಆರ್‌.ಪೇಟೆ ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮವಾಗಿತಾಲೂಕಿನ ಸಾರಂಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮೊರಾರ್ಜಿ ದೇಸಾಯಿವಸತಿ ಶಾಲೆ, ಮಾದಾಪುರ ಗ್ರಾಮದಲ್ಲಿರುವ ಮತ್ತು ಗವಿಮಠದಲ್ಲಿರುವ ಮೊರಾರ್ಜಿದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್‌ ಕೇರ್‌ಸೆಂಟರ್‌ಗಳನ್ನು ಸ್ಥಾಪಿಸಲು ಸಿದ್ಧತೆಗಳನ್ನು ಮಾಡಿಕೊಂಡಿರುವ ಬಗ್ಗೆ ಮಾಹಿತಿ ನೀಡಿದರು.

ಏಕಕಾಲಕ್ಕೆ ಸಾವಿರ ಸೋಂಕಿತರಿಗೆ ವಸತಿ,ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಮತ್ತು ಊಟದ ವ್ಯವಸ್ಥೆ ಕಲ್ಪಿಸಲು ಅಗತ್ಯವಾಗಿ ಕೈಗೊಳ್ಳಬೇಕಾದ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಸ್ವಾಬ್‌ ಟೆಸ್ಟ್‌ ಮಾಡುವ ಕೆಲಸ ಹೆಚ್ಚಿಸಲಾಗಿದೆ ಎಂದರು.

Advertisement

ಸಮೀಪದಲ್ಲೇ ತರಕಾರಿ ಖರೀದಿಸಿ: ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ನಿಯಮವನ್ನುಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ತರಕಾರಿ ಖರೀದಿಸಲು ಆಯಾ ವಾರ್ಡ್‌ಗಳಸಮೀಪದಲ್ಲಿಯೇ ಹಣ್ಣು-ತರಕಾರಿಗಳ ಮಾರಾಟ ಮಳಿಗೆಗಳನ್ನು ಸ್ಥಾಪಿಸಲುಕ್ರಮಕೈಗೊಳ್ಳಲಾಗಿದೆ ಎಂದು ಶಿವಮೂರ್ತಿ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸ್ವ್ಯಾಬ್‌ ಸಂಗ್ರಹಣೆ ಮತ್ತು ಫ‌ಲಿತಾಂಶದ ಬಗ್ಗೆ ಆಸ್ಪತ್ರೆ ಆಡಳಿತವೈದ್ಯಾಧಿಕಾರಿ ಡಾ.ಎಂ.ಎಸ್‌.ಜಯಂತ್‌ಅವರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ತಾಪಂ ಇಒ ಚಂದ್ರಶೇಖರ್‌ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್‌, ಪುರಸಭಾ ಮುಖ್ಯಾಧಿಕಾರಿಸತೀಶ್‌ ಕುಮಾರ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ದೀಪಕ್‌ ಮುಂತಾದ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next