ಉಡುಪಿ: ನಗರದ ಅಮ್ಮಣ್ಣಿ ರಾಮಣ್ಣ ಹಾಲ್‌ನಲ್ಲಿ ನಡೆಯುತ್ತಿದ್ದ ಕೋವಿಡ್ ಲಸಿಕಾಕರಣ ಕೇಂದ್ರ ಮತ್ತು ಜಿಲ್ಲಾಸ್ಪತ್ರೆಯ ಕೋವಿಡ್ ಲ್ಯಾಬ್‌ಗ ಡಿಸಿ ಕೂರ್ಮಾ ರಾವ್ ಎಂ. ಅವರು ಶುಕ್ರವಾರ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಕೋವಿಡ್‌ನ ಅಪಾಯದಿಂದ ರಕ್ಷಿಸಿಕೊಳ್ಳಲು ಲಸಿಕೆ ಪಡೆಯುವುದು ಅಗತ್ಯವಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ನಾಗರಿಕರೂ ತಪ್ಪದೇ ಲಸಿಕೆ ಪಡೆಯಬೇಕು. ಜಿಲ್ಲೆಯಲ್ಲಿ ಈಗಾಗಲೇ ಶೇ. 79 ಪ್ರಥಮ ಡೋಸ್ ಲಸಿಕೆ ನೀಡಲಾಗಿದೆ ಎಂದರು.
ಅನಂತರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣಗೊಂಡಿರುವ ಆಕ್ಸಿಜನ್ ಪ್ಲ್ಯಾಂಟ್, ಪಿಎಂ ಕೇರ್‌ನಡಿ ನಿರ್ಮಾಣಕ್ಕೆ ಸಿದ್ಧವಿರುವ ಆಕ್ಸಿಜನ್ ಕೇಂದ್ರ ಹಾಗೂ ನೂತನ ಜಿಲ್ಲಾಸ್ಪತ್ರೆ ನಿರ್ಮಾಣದ ಸ್ಥಳದ ಪರಿಶೀಲನೆ ನಡೆಸಿದರು.
ಇದನ್ನೂ ಓದಿ:ಕಲಬುರಗಿ: ಒಂದೇರಡು ಅಹಿತಕರ ಘಟನೆ ಬಿಟ್ಟರೆ ಶಾಂತಿಯುತ ಮತದಾನ
ನಗರಸಭೆ ಸದಸ್ಯರಾದ ರಮೇಶ್ ಕಾಂಚನ್, ವಿಜಯ ಪೂಜಾರಿ, ಡಿಎಚ್‌ಒ ಡಾ| ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ| ಮಧುಸೂದನ್ ನಾಯಕ್, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ| ವಾಸುದೇವ ಉಪಾಧ್ಯಾಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ನಾಗರತ್ನಾ, ಕೋವಿಡ್ ನೋಡಲ್ ಅಧಿಕಾರಿ ಡಾ| ಪ್ರಶಾಂತ್ ಭಟ್, ಕೋವಿಡ್ ಲಸಿಕಾ ನೋಡಲ್ ಅಧಿಕಾರಿ ಡಾ| ಎಂ.ಜಿ. ರಾಮ, ಡಾ| ಪ್ರೇಮಾನಂದ್ ಉಪಸ್ಥಿತರಿದ್ದರು.