Advertisement

ಐಸೊಲೇಷನ್‌ ವಾರ್ಡ್‌ಗೆ ಡೀಸಿ ಭೇಟಿ

06:10 PM Mar 14, 2020 | Team Udayavani |

ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ಕೊರೊನಾಗೆ ಸಂಬಂಧಿಸಿ ತೆರೆದಿರುವ ಐಸೊಲೇಷನ್‌ ವಾರ್ಡ್‌ಗೆ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ ಕುಮಾರ್‌ ಭೇಡಿ ನೀಡಿದರು.

Advertisement

ಈಗಾಗಲೇ 10 ಬೆಡ್‌ಗಳನ್ನು ಐಸೊಲೇಷನ್‌ ವಾರ್ಡ್‌ನಲ್ಲಿ ಹಾಕಲಾಗಿದ್ದು, ಹೆಚ್ಚುವರಿಯಾಗಿ 5 ಬೆಡ್‌ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ವೈರಸ್‌ ಲಕ್ಷಣ ಕಂಡು ಬರುವ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಲು ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಕಂಟ್ರೋಲ್‌ ರೂಂ ಸ್ಥಾಪಿಸಿದ್ದು, ಜನರು ಗೊಂದಲ ಪರಿಹರಿಸಿಕೊಳ್ಳಬಹುದು. ವಿದೇಶದಿಂದ ಬಂದ ವ್ಯಕ್ತಿಯಲ್ಲಿ ಕೊರೊನಾ ಲಕ್ಷಣ ಕಂಡುಬಂದರೆ ಕಂಟ್ರೋಲ್‌ ರೂಂಗೆ ತಿಳಿಸಬೇಕು ಎಂದರು.

ಅವಶ್ಯಕತೆ ಇರುವ ವ್ಯಕ್ತಿಗಳನ್ನು ಪರೀಕ್ಷೆ ಮಾಡಬೇಕು. ಸಿಬ್ಬಂದಿಗೆ ಕೊರೊನಾಗೆ ಸಂಬಂಧಿತ ಹೆಚ್ಚಿನ ತರಬೇತಿ ನೀಡಬೇಕು. ಸಾರ್ವಜನಿಕರು ಯಾವುದೇ ವದಂತಿಗೆ ಕಿವಿಗೊಡಬಾರದೆಂದು ಮನವಿ ಮಾಡಿದರು. ಜಿಪಂ ಸಿಇಒ ಶುಭಾಕಲ್ಯಾಣ್‌, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವೀರಭದ್ರಯ್ಯ, ಆರ್‌.ಎಂ.ಒ. ಡಾ.ವೀಣಾ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next