Advertisement
ಮಾ. 19ರಂದು ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ಗ್ರಾಮವಾಸ್ತವ್ಯವನ್ನು ಮಾ.21ಕ್ಕೆ ನಿಗದಿಯಾಗಿದೆ. ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಅನೇಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಿದ್ದಾರೆ. ಉಳಿದ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಿದ್ದಾರೆ. ಗ್ರಾಮಸ್ಥರು ತಮ್ಮ ದೂರು-ದುಮ್ಮಾನ ಹಾಗೂ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳಿಗೆ ಹೇಳಿಕೊಳ್ಳುವ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ. ಜಿಲ್ಲಾಧಿಕಾರಿಗಳು ಸುಗ್ಗೇನಹಳ್ಳಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದರೆ, ತಾಲೂಕುಮಟ್ಟದಲ್ಲಿ ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರ್‌ರು ಒಂದೊಂದು ಊರುಗಳನ್ನು ಗುರುತಿಸಿ ಆ ಗ್ರಾಮಗಳಲ್ಲಿ ಗ್ರಾಮವಾಸ್ತವ್ಯ ನಡೆಸುವ ಮೂಲಕ ಜನರ ಸಮಸ್ಯೆಗಳಿಗೆ ದನಿಯಾಗುವ ಕೆಲಸ ಮಾಡಲಿದ್ದಾರೆ.
Related Articles
Advertisement
ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ಗ್ರಾಮದಲ್ಲಿನ ಎಲ್ಲ ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ 3 ಮತ್ತು ಅಧಿಕಾರ ಬಂದ್ ತಾಳೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಎಲ್ಲ ಪಹಣಿಗಳಲ್ಲಿಯೂ ಕೂಡ ಕಾಲಂ 3 ಮತ್ತು ಕಾಲಂ 9 ತಾಳೆ ಆಗುತ್ತವೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಖಚಿತಪಡಿಕೊಳ್ಳುವುದು ಮತ್ತು ಲೋಪಗಳು ಕಂಡುಬಂದಿರುವ ಪ್ರಕರಣಗಳನ್ನು ಗುರುತಿಸಿ ವಿಲೇ ಮಾಡಲು ಆದೇಶ ಹೊರಡಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವುದು. ಗ್ರಾಮದಲ್ಲಿ ಸರ್ಕಾರಿ ಜಮೀನು ಹಾಗೂ ಸಾರ್ವಜನಿಕ ಉದ್ದೇಶಗಳಿಗೆ ಕಾಯ್ದಿರಿಸಲಾಗಿರುವ ಜಮೀನುಗಳು ಅಕ್ರಮವಾಗಿ ಒತ್ತುವರಿಯಾಗಿದ್ದಲ್ಲಿ ಅಂಥ ಜಮೀನುಗಳನ್ನು ಗುರುತಿಸಿ ತೆರವುಗೊಳಿಸಲು ಕ್ರಮಕೈಗೊಳ್ಳುವುದು. ಗ್ರಾಮಗಳಲ್ಲಿ ವ್ಯಾಕ್ಸಿನೇಷನ್ ಹಾಕಲು ಹೆಲ್ತ್‌ಕ್ಯಾಂಪ್ ಆಯೋಜಿಸಿ ನಿಯಮಾನುಸಾರ ಕ್ರಮ ಕೈಗೊಳ್ಳತಕ್ಕದ್ದು ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ತಿಳಿಸಿದ್ದಾರೆ.