Advertisement

ಡಿಸಿಸಿ-ಅಪೆಕ್ಸ್‌ ಬ್ಯಾಂಕ್‌ ವಿಲೀನ: ಸಾಧಕ-ಬಾಧಕ ಅಧ್ಯಯನ ನಡೆಸಿ ಕೇಂದ್ರಕ್ಕೆ ಪ್ರಸ್ತಾವನೆ

10:17 PM Mar 29, 2022 | Team Udayavani |

ಬೆಂಗಳೂರು: ರಾಜ್ಯದ ಡಿಸಿಸಿ ಬ್ಯಾಂಕ್‌ಗಳನ್ನು ಅಪೆಕ್ಸ್‌ ಬ್ಯಾಂಕ್‌ನಲ್ಲಿ ವಿಲೀನಗೊಳಿಸುವ ಬಗ್ಗೆ ಸಾಧಕ-ಬಾಧಕಗಳ ಅಧ್ಯಯನ ನಡೆಸಿ ಅನಂತರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು.

Advertisement

ಮಂಗಳವಾರ ಪ್ರಶ್ನೋತ್ತರ ವೇಳೆ ಆಡಳಿತ ಪಕ್ಷದ ಮುಖ್ಯ ಸಚೇತಕ ಸದಸ್ಯ ವೈ.ಎ. ನಾರಾಯಣಸ್ವಾಮಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನೆರೆಯ ಕೇರಳ, ಗುಜರಾತ್‌, ಛತ್ತೀಸ್‌ಗಡದಲ್ಲಿ ಡಿಸಿಸಿ ಬ್ಯಾಂಕ್‌ಗಳನ್ನು ಅಲ್ಲಿನ ಅಪೆಕ್ಸ್‌ ಬ್ಯಾಂಕ್‌ಗಳಲ್ಲಿ ವಿಲೀನ ಮಾಡಲಾಗಿದೆ.

ಇದರಿಂದ ಡಿಸಿಸಿ ಬ್ಯಾಂಕ್‌ಗಳ ಕಮಿಷನ್‌ ನೇರವಾಗಿ ರೈತರಿಗೆ ಸಿಗಲಿದೆ. ಇದೇ ಮಾದರಿಯಲ್ಲಿ ರಾಜ್ಯದಲ್ಲೂ ಈ ವಿಲೀನಗೊಳಿಸಲು ಸಾಧಕ-ಬಾಧಕಗಳ ಕುರಿತು ಅಧ್ಯಯನ ನಡೆಸಲಾಗುತ್ತಿದೆ.

ಈಗಾಗಲೇ ರಾಜ್ಯದ 21 ಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕರ ಜತೆಗೆ ಸಭೆ ನಡೆಸಲಾಗಿದೆ. ವಿಲೀನದ ಬಗ್ಗೆ ಅಧ್ಯಯನ ವರದಿ ಬಂದ ಮೇಲೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅಗತ್ಯಬಿದ್ದರೆ ಕೇರಳ, ಗುಜರಾತ್‌, ಛತ್ತೀಸ್‌ಗಡಕ್ಕೆ ಅಧಿಕಾರಿಗಳ ತಂಡ ಕಳುಹಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ಎರಡನೇ ಮದುವೆಯಾಗಲಿದ್ದಾರೆ 2015 ರ ಐಎಎಸ್ ಟಾಪರ್ ಟೀನಾ ದಾಬಿ

Advertisement

ಕೃಷಿಯೇತರ ಸಾಲ-ಪ್ರಕರಣ ದಾಖಲು
ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕಿನಿಂದ ಕಳೆದ ಐದು ವರ್ಷಗಳಲ್ಲಿ 1,421 ಜನರಿಗೆ ಕೃಷಿಯೇತರ ಸಾಲ ನೀಡಲಾಗಿದ್ದು, ಇದರಲ್ಲಿ ಕೇವಲ 133 ಸುಸ್ತಿದಾರರಾಗಿದ್ದಾರೆ. ಇದರ ಮೊತ್ತ 2.40 ಕೋಟಿ ರೂ. ಆಗಿದ್ದು, ಅವರೆಲ್ಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ರೈತರಿಗೆ ಅಲ್ಪಾವಧಿ ಮತ್ತು ದೀರ್ಘಾವಧಿ ಸಾಲ ನೀಡಲಾಗಿದ್ದು, ಸುಸ್ತಿದಾರ ರೈತರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next