Advertisement

ಬೆಳಗಾವಿ: ಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಯಕರ ಗುಪ್ತ ಸಭೆ!

02:16 PM Nov 13, 2020 | sudhir |

ಅಥಣಿ: ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನ.14 ರಂದು ನಡೆಯಲಿದ್ದು, ಗದ್ದುಗೆಗಾಗಿ ನಿರ್ದೇಶಕರ ಮಧ್ಯೆ ಕಸರತ್ತು ತೀವ್ರಗೊಂಡಿವೆ. ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ಉಮೇಶ ಕತ್ತಿ, ಮತ್ತು ರಮೇಶ್‌ ಕತ್ತಿ ಹಾಗೂ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಸಾಬ ಜೊಲ್ಲೆ ಸೇರಿದಂತೆ ಇನ್ನಿತರರು ಗುರುವಾರ ಗೌಪ್ಯ ಸಭೆ ನಡೆಸಿದ್ದಾರೆ.

Advertisement

ಈ ಸಭೆ ಜಿಲ್ಲಾ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ. ಬ್ಯಾಂಕ್‌ ಅಧ್ಯಕ್ಷ ಸ್ಥಾನದ ಮೇಲೆ ಈ ಸಲವೂ ರಮೇಶ್‌ ಕತ್ತಿ ಕಣ್ಣಿಟ್ಟಿದ್ದಾರೆ. ಈ ಕಾರಣಕ್ಕೆ ಸಹೋದರ ಉಮೇಶ ಕತ್ತಿ ಮೇಲೆ ಒತ್ತಡ ಹೇರುತ್ತಿರುವ ರಮೇಶ್‌ ಕತ್ತಿ ಹುದ್ದೆಯಲ್ಲಿ
ಮುಂದುವರೆಯಲು ಕಸರತ್ತು ಆರಂಭಿಸಿದ್ದಾರೆ.

ಅಲ್ಲದೇ ಗುರುವಾರ ನಡೆದ ಸಭೆಯಲ್ಲಿ ಡಿಸಿಸಿ ಬ್ಯಾಂಕಿನ ಹಲವು ನಿರ್ದೇಶಕರು ಭಾಗಿಯಾಗಿದ್ದರು. ಇತ್ತ ಡಿಸಿಎಂ ಲಕ್ಶ್ಮಣ ಸವದಿ ತಮ್ಮ ಆಪ್ತ ಮಹಾಂತೇಶ ದೊಡ್ಡನಗೌಡರ ಅವರನ್ನು ಅಧ್ಯಕ್ಷ ಹುದ್ದೆಗೆ ಕೂಡಿಸಲು ಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಈ
ಕಾರಣಕ್ಕೆ ಎಲ್ಲ ನಾಯಕರು ಸಭೆ ನಡೆಸಿದ್ದರೂ, ಗದ್ದುಗೆಗೆ ತಂತ್ರ-ಪ್ರತಿತಂತ್ರ ಮುಂದುವರೆಸಿದ್ದಾರೆ. 16 ನಿರ್ದೇಶಕ ಸ್ಥಾನ ಹೊಂದಿರುವ ಡಿಸಿಸಿ ಬ್ಯಾಂಕಿಗೆ 13 ಸ್ಥಾನ ಅವಿರೋಧ ಆಯ್ಕೆ ಮಾಡಲಾಗಿತ್ತು. ಉಳಿದ ಮೂರು ಸ್ಥಾನಗಳಿಗೆ ನವೆಂಬರ್‌ 6ರಂದು ಚುನಾವಣೆ ನಡೆದಿತ್ತು. ಅದರಲ್ಲಿ ಕಮಲ ನಾಯಕರ ಬಣದ ಇಬ್ಬರು ಗೆಲುವು ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next