Advertisement

ರೈತರನ್ನು ಕಡೆಗಣಿಸಿದರೆ ದೇಶ ಉಳಿಯುವುದಿಲ್ಲ: ಬ್ಯಾಲಹಳ್ಳಿ ಬೈರೇಗೌಡ

07:40 PM Jun 22, 2021 | Team Udayavani |

ಶಿಡ್ಲಘಟ್ಟ: ದೇಶದಲ್ಲಿ ಯಾರಾದರೂ ಜೀತದಾಳು ಇದ್ದರೇ ಅದು ರೈತ ಮಾತ್ರ. ರೈತ ಬೆಳೆಯುವ ಬೆಳೆಗಳಿಗೆ ಸೂಕ್ತ ದರ ಕೊಡುವರು ಇಲ್ಲ. ನಮಗೆ ಕಷ್ಟ ಬಂದಾಗ ನೆರವು ಒದಗಿಸುವರು ಇಲ್ಲ. ನಮ್ಮ ಕಷ್ಟವನ್ನು ನಾವೇ ನಿವಾರಣೆ ಮಾಡಿಕೊಳ್ಳಬೇಕು. ನಮ್ಮ ಬೆವರು ನಾವೇ ಒರೆಸಿಕೊಳ್ಳಬೇಕು ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.

Advertisement

ಪ್ರತಿಯೊಂದು ಹಳ್ಳಿಯಲ್ಲಿ ಮಹಿಳೆಯರಿಗೆ ಸಾಲ ಕೊಡಿ: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ವಿ.ಮುನಿಯಪ್ಪ ಅವರ ಮಾರ್ಗದರ್ಶನದಲ್ಲಿ ಪ್ರತಿಯೊಂದು ಹಳ್ಳಿಯಲ್ಲಿ ಪ್ರತಿಯೊಬ್ಬ ತಾಯಂದಿರಿಗೂ ಸಾಲ ಸೌಲಭ್ಯವನ್ನು ಒದಗಿಸಲು ಡಿಸಿಸಿ ಬ್ಯಾಂಕ್ ಸಿದ್ದವಾಗಿದೆ. ಕೋವಿಡ್-19 ಪ್ರಭಾವದಿಂದ ಸಾಲ ಸೌಲಭ್ಯ ವಿತರಣೆಯಲ್ಲಿ ವಿಳಂಬವಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಸಾಲ ಸೌಲಭ್ಯವನ್ನು ಒದಗಿಸುವ ಮೂಲಕ ಮಹಿಳೆಯರು ಆರ್ಥಿಕವಾಗಿ ಅಭಿವೃಧ್ಧಿ ಹೊಂದಲು ಎಲ್ಲಾ ರೀತಿಯ ಸಹಕಾರ ಮತ್ತು ನೆರವು ನೀಡುವುದಾಗಿ ಭರವಸೆ ನೀಡಿದರು.

ಶಾಸಕ ವಿ.ಮುನಿಯಪ್ಪ ಮಾತನಾಡಿ ದೇಶದಲ್ಲಿ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಬಡ್ಡಿರಹಿತ ಸಾಲ ನೀಡುವ ಮೂಲಕ ಡಿಸಿಸಿ ಬ್ಯಾಂಕ್ ಐತಿಹಾಸಿಕ ದಾಖಲೆ ಮಾಡಿದೆ. ಅದಕ್ಕಾಗಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮತ್ತು ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಪ್ರತಿಯೊಂದು ಮಹಿಳೆಯರಿಗೆ ಸಾಲ ಸೌಲಭ್ಯ ನೀಡಲು ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗುವುದೆಂದರು.

ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ನಾಗರಾಜ್,ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕ ಆನಂದ್,ಸಾದಲಿ ವಿ.ಎಸ್.ಎಸ್.ಎನ್ ಸಹಕಾರ ಸಂಘದ ಅಧ್ಯಕ್ಷ ಇರಗಪ್ಪನಹಳ್ಳಿ ಅಶ್ವತ್ಥರೆಡ್ಡಿ, ಉಪಾಧ್ಯಕ್ಷ ವೆಂಕಟರಾಯಪ್ಪ, ಸಾದಲಿ ಗ್ರಾಪಂ ಮಾಜಿ ಅಧ್ಯಕ್ಷ ಗೋವಿಂದರಾಜು,ಯುವ ಕಾಂಗ್ರೆಸ್ ಮುಖಂಡ ಎಸ್.ಜೆ.ಪ್ರಮೋದ್, ಬಿ.ಎ.ಲಕ್ಷ್ಮೀಪತಿ,ವಿ.ಎಸ್.ಎಸ್.ಎನ್. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭೀಮಪ್ಪ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next