Advertisement
ಯಾವುದೇ ಎಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿರುವ ಅಭ್ಯರ್ಥಿಗಳು ಬೇರೆ ಯಾವುದೇ ಎಂಜಿನಿಯರಿಂಗ್ ಪದವಿ ಪ್ರವೇಶಕ್ಕೆ ಅರ್ಹರು ಎಂದು ಅಖೀಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿ ಷತ್ತು (ಎಐಸಿಟಿಇ) 2020ರಲ್ಲಿ ನಿಯಮಗಳನ್ನು ಬದಲಾವಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೂತನನಿಯಮಗಳನ್ನು ಅಳವಡಿಸಿಕೊಳ್ಳಲಾಗಿದೆ. ಆರಂಭಿಕ ಹಂತದಲ್ಲಿ ಡಿಸಿಇಟಿ- 2022ರ ಪರೀಕ್ಷೆಗೆ ಮಾತ್ರ ಪರಿಗಣಿಸಿ ಪರೀಕ್ಷಾ ಪ್ರಾಧಿಕಾರವು ನಿಯಮಗಳನ್ನು ಆದೇಶಿಸಿದೆ.
ಡಿಸಿಇಟಿ-2022ರ ಪರೀಕ್ಷೆಯಲ್ಲಿ ಡಿಪ್ಲೊಮಾ ವ್ಯಾಸಂಗದಲ್ಲಿ ಅಭ್ಯಾಸ ಮಾಡಿರುವ ಅಪ್ಲೆ„ಡ್ ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ಮಾತ್ರ ಪರಿಗಣಿಸಿ ಎಲ್ಲ ವಿಷಯ ಗಳಿಗೆ ಅನ್ವಯವಾಗುವಂತೆ ಒಂದು ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಡಿಸಿಇಟಿ-2022ರ ಪರೀಕ್ಷೆಯನ್ನು 100 ಅಂಕಗಳಿಗೆ 3 ಗಂಟೆಯ ಅವಧಿಯ ಪರೀಕ್ಷೆಯನ್ನು ನಡೆಸುವುದು.
ಡಿಪ್ಲೊಮಾ ಅಂತಿಮ ವರ್ಷದ 5 ಮತ್ತು 6ನೇ ಸೆಮಿಸ್ಟರ್ ಪರೀಕ್ಷೆಯ ತೇರ್ಗಡೆಯಾದ ಫಲಿತಾಂಶವನ್ನು ಪರಿಗಣನೆಗೆ ತೆಗೆದುಕೊಳ್ಳುವುದು. ಡಿಸಿಇಟಿ-2022ರ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 100 ಅಂಕಗಳಿಗೆ ಗಳಿಸಿದ ಅಂಕಗಳ ಶೇ.50ರಷ್ಟು ಅಂಕಗಳನ್ನು ಪರಿಗಣಿಸುವುದು. ಅದೇ ರೀತಿ ಅಂತಿಮ ವರ್ಷದ ಡಿಪ್ಲೊಮಾ ತೇರ್ಗಡೆಯಾಗಿ ಪಡೆದ ಒಟ್ಟಾರೆ ಅಂಕಗಳ ಶೇ.50ರಷ್ಟು ಅನ್ನು ಪರಿಗಣನೆಗೆ ತೆಗೆದುಕೊಂಡು ಎರಡನ್ನೂ ಸೇರಿಸಿ ವಿದ್ಯಾರ್ಥಿಗಳ ರ್‍ಯಾಂಕ್ ಅನ್ನು ನಿಗದಿಪಡಿಸಲಾಗುತ್ತದೆ. ಪ್ರಶ್ನೆಪತ್ರಿಕೆಯಲ್ಲಿ ಬದಲಾವಣೆ ಏನು?
ಡಿಪ್ಲೊಮಾದಲ್ಲಿ ಬೇರೆ ಬೇರೆ ಕೋರ್ಸ್‌ಗಳನ್ನು ಕಲಿಯುವವರಿಗೆ ವಿಜ್ಞಾನ ಮತ್ತು ಗಣಿತ ವಿಷಯಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ಸಿದ್ಧಪಡಿಸ ಬೇಕಿದೆ. ಈ ಹಿನ್ನೆಲೆಯಲ್ಲಿ 100 ಅಂಕಗಳಲ್ಲಿ ಯಾವ ವಿಷಯಕ್ಕೆ ಎಷ್ಟು ಅಂಕಗಳ ಪ್ರಶ್ನೆಗಳನ್ನು ನೀಡಬೇಕು ಎಂಬುದು ಇನ್ನಷ್ಟೇ ನಿರ್ಣಯ ವಾಗಬೇಕಿದೆ. ಈವರೆಗೆ 180 ಅಂಕಗಳಿಗಿದ್ದ ಪರೀಕ್ಷೆಯನ್ನು 100 ಅಂಕಗಳಿಗೆ ಮತ್ತು ಎಲ್ಲ ಕೋರ್ಸ್‌ಗಳಿಗೆ ಅನ್ವಯ ಆಗಬೇಕಿರುವುದರಿಂದ ಪ್ರಶ್ನೆಪತ್ರಿಕೆ ಮಾದರಿಯನ್ನು ತಜ್ಞರೊಂದಿಗೆ ಚರ್ಚಿಸಿ ಅಧಿಸೂಚನೆ ವೇಳೆಗೆ ವಿದ್ಯಾರ್ಥಿಗಳಿಗೆ ತಿಳಿಸಲಾಗುವುದು ಎಂದು ಕೆಇಎ ಮೂಲಗಳು ತಿಳಿಸಿವೆ.
Related Articles
Advertisement