Advertisement

‘ಮಹಾ’ರಾಜಕೀಯ; ಡಿಸಿಎಂ ಅಜಿತ್ ಪವಾರ್ ರಾಜೀನಾಮೆ! ; ಫಡ್ನವೀಸ್ ರಾಜೀನಾಮೆ ಸಾಧ್ಯತೆ

09:42 AM Nov 28, 2019 | Team Udayavani |

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬುಧವಾರ ಸಾಯಂಕಾಲದೊಳಗೆ ಬಹುಮತ ಸಾಬೀತುಪಡಿಸುವಂತೆ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ ಸರಕಾರಕ್ಕೆ ಸುಪ್ರೀಂ ಕೋರ್ಟ್ ಇಂದು ನಿರ್ದೇಶನ ನೀಡಿರುವ ಬೆನ್ನಲ್ಲೇ ಬಿಜೆಪಿಗೆ ಬೆಂಬಲ ನೀಡುವ ಮೂಲಕ ಸರಕಾರ ರಚನೆಗೆ ಕಾರಣಕರ್ತರಾಗಿದ್ದ ಎನ್.ಸಿ.ಪಿ.ಯ ಅಜಿತ್ ಪವಾರ್ ಅವರು ಇಂದು ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Advertisement

ಅಜಿತ್ ಪವಾರ್ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಮಧ್ಯಾಹ್ನ 3.30ಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತುರ್ತು ಪತ್ರಿಕಾಗೋಷ್ಠಿಯನ್ನು ಕರೆದಿದ್ದಾರೆ. ಫಡ್ನವೀಸ್ ಅವರ ಈ ಪತ್ರಿಕಾಗೋಷ್ಠಿ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಬಹುಮತ ಸಾಬೀತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶವನ್ನು ಪ್ರಕಟಿಸಿದ್ದು ಅದರಲ್ಲಿ ಬಹುಮತ ಸಾಬೀತು ಪ್ರಕ್ರಿಯೆಗೆ ಕೆಲವೊಂದು ಸ್ಪಷ್ಟ ನಿರ್ದೇಶನವನ್ನು ನೀಡಿದೆ. ಬುಧವಾರ ಸಾಯಂಕಾಲದೊಳಗೆ ನೂತನ ಶಾಸಕರೆಲ್ಲಾ ಪ್ರಮಾಣವಚನ ಸ್ವೀಕರಿಸಿ ಆ ಬಳಿಕ ಬಹುಮತ ಸಾಬೀತು ಪ್ರಕ್ರಿಯೆಯನ್ನು ಮುಗಿಸುವಂತೆ ಕೋರ್ಟ್ ನಿರ್ದೇಶನ ನೀಡಿದೆ. ಮತ್ತು ವಿಶ್ವಾಸಮತ ಕಲಾಪದ ಸಂಪೂರ್ಣ ಪ್ರಕ್ರಿಯೆಯನ್ನು ನೇರಪ್ರಸಾರ ಮಾಡುವಂತೆಯೂ ಕೋರ್ಟ್ ತನ್ನ ನಿರ್ದೇಶನದಲ್ಲಿ ತಿಳಿಸಿದೆ.

ಆದರೆ ಇದೀಗ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ರಾಜೀನಾಮೆ ಸಲ್ಲಿಸಿರುವುದರಿಂದ ನಾಳೆ ಫಡ್ನವೀಸ್ ಅವರು ವಿಶ್ವಾಸಮತಕ್ಕೆ ಹೋಗುತ್ತಾರೆಯೇ ಇಲ್ಲವೇ ಎಂಬುದು ಇಂದು ಸಾಯಂಕಾಲದೊಳಗೆ ನಿರ್ಣಯವಾಗುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next