Advertisement

ಬಿಜೆಪಿ ಯುವ ಮುಖಂಡರಿಗೆ ಸೋಶಿಯಲ್‌ ಮೀಡಿಯಾ ಪಾಠ ಮಾಡಿದ ಡಿಸಿಎಂ ‌ಅಶ್ವತ್ಥನಾರಾಯಣ

03:57 PM Feb 07, 2021 | Team Udayavani |

ಬೆಂಗಳೂರು: ಸರಕಾರದ ಜನಪರ ಕಾರ್ಯಕ್ರಮಗಳನ್ನು, ಪಕ್ಷ ಹಮ್ಮಿಕೊಳ್ಳುವ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ನೇರವಾಗಿ, ಸರಳವಾಗಿ ತಲುಪಿಸಬಹುದು. ಈ ಕಾರ್ಯಗಳನ್ನು ಸಮರ್ಥವಾಗಿ ಮಾಡುವ ಕಡೆಗೆ ಹೆಚ್ಚಿನ ಗಮನ‌ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

Advertisement

ಬೆಂಗಳೂರಿನಲ್ಲಿ ಭಾನುವಾರ ಪಕ್ಷದ ರಾಜ್ಯ ಘಟಕ ಹಮ್ಮಿಕೊಂಡಿದ್ದ ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳು ಇವತ್ತು ಪರಿಣಾಮಕಾರಿಯಾಗಿ ಬೆಳೆದಿವೆ. ಇವುಗಳನ್ನು ನಾವು ಸದುಪಯೋಗ ಮಾಡಿಕೊಳ್ಳಬೇಕು ಹಾಗೂ ಆ ಬಗ್ಗೆ ನಿಪುಣತೆಯನ್ನು ಸಾಧಿಸಿಕೊಳ್ಳಬೇಕು ಎಂದರು.

ಇದನ್ನೂ ಓದಿ:ಉತ್ತರಾಖಂಡ್ ನಲ್ಲಿ ಹಿಮ ಸ್ಪೋಟ: ಹರಿದ್ವಾರ- ಋಷಿಕೇಶದಲ್ಲಿ ಪ್ರವಾಹ ಭೀತಿ

ಮಾಧ್ಯಮ ಕ್ಷೇತ್ರ ವಿವಿಧ ಆಯಾಮಗಳಲ್ಲಿ ಬೆಳೆಯುತ್ತಿದೆ. ಸಾಂಪ್ರದಾಯಿಕ ಮಾಧ್ಯಮ ಒಂದೆಡೆಯಾದರೆ, ಸಾಮಾಜಿಕ ಜಾಲತಾಣಗಳ ರೂಪದಲ್ಲಿ ನವ ಮಾಧ್ಯಮಗಳು ವೇಗವಾಗಿ ಬೆಳೆಯುತ್ತಿವೆ. ಇಂಥ ಸಂದರ್ಭದಲ್ಲಿ ಇಂಥ ಜಾಲತಾಣಗಳಲ್ಲಿ ಪಕ್ಷದ ಧ್ವನಿಯನ್ನು ಮೊಳಗಿಸಬೇಕಾದರೆ ಅದಕ್ಕೆ ಅಗತ್ಯವಾದ ಜ್ಞಾನ, ಅಧ್ಯಯನ, ಪೂರ್ವಸಿದ್ಧತೆ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ ಎಂದು ಡಿಸಿಎಂ ಯುವ ಮುಖಂಡರಿಗೆ ಹೇಳಿದರು.

ಸರಕಾರ ಯಾವ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ? ಆ ಕಾರ್ಯಕ್ರಮಗಳು ಯಾರಿಗಾಗಿ? ಅವುಗಳ ಉದ್ದೇಶವೇನು? ಎಂಬ ಅಂಶಗಳ ಬಗ್ಗೆ ಅರಿವು ಹೊಂದಿರಬೇಕು. ಅದೇ ರೀತಿ ಜನಪರವಾಗಿ ಪಕ್ಷ ಯಾವ ದಿಕ್ಕಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂಬ ತಿಳಿವಳಿಕೆಯೂ ಇರಬೇಕು ಎಂದು ವಿವರಿಸಿದರು.

Advertisement

ಸಂಸದ ಪಿ.ಸಿ.ಮೋಹನ್ ಅವರು ಕಾರ್ಯಾಗಾರವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಬಿಜೆಪಿಯ ರಾಜ್ಯಮಟ್ಟದ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ವಿನೋದ್‌ ಕೃಷ್ಣಮೂರ್ತಿ ಪ್ರಸ್ತಾವಿಕ ಭಾಷಣ ಮಾಡಿದರು, ಸಹ ಸಂಚಾಲಕ ಪ್ರಶಾಂತ್‌ ಜಾಧವ್‌ ಉಪಸ್ಥಿತರಿದ್ದರು. ಎಲ್ಲ ಜಿಲ್ಲೆಗಳಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ಪ್ರಕೋಷ್ಠದಲ್ಲಿ ಕೆಲಸ ಮಾಡುತ್ತಿರುವವರೆಲ್ಲರೂ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next