ಮಂಗಳೂರು: ನಗರದಲ್ಲಿರುವ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಇಂದು ರಾಜ್ಯದ ಉಪಮುಖ್ಯಮಂತ್ರಿ ಅಶ್ವಥ ನಾರಾಯಣ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ದಕ್ಷಿಣ ಕನ್ನಡದಲ್ಲಿ ನಡೆಯಲಿರುವ ಗ್ರಾಮಸ್ವರಾಜ್ಯ ಸಮಾವೇಶದ ಹಿನ್ನೆಲೆಯಲ್ಲಿ ರಾಜ್ಯ ನಾಯಕರು ಕದ್ರಿ ಕ್ಷೇತ್ರಕ್ಕೆ ಭೇಟಿ ನೀಡಿದರು.
ಇದನ್ನೂ ಓದಿ:ಸಚಿವ ಸಂಪುಟ ವಿಸ್ತರಣೆ ಬಗ್ಗೆ CM & ಹೈಕಮಾಂಡ್ ನಿರ್ಧಾರ ತಗೆದುಕೊಳ್ಳುತ್ತದೆ: ಅಶ್ವಥ್ ನಾರಾಯಣ
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಸಂಸದ ಎಸ್. ಮುನಿಸ್ವಾಮಿ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಮೇಯರ್ ದಿವಾಕರ ಪಾಂಡೇಶ್ವರ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು.