Advertisement

ಮಕ್ಕಳಿಗೆ ಅಂಗನವಾಡಿ ಹಂತದಿಂದಲೇ ವ್ಯವಸ್ಥಿತ ಶಿಕ್ಷಣ ನೀಡಬೇಕಾಗಿದೆ ; ಡಿಸಿಎಂ

04:06 PM Nov 06, 2020 | sudhir |

ಬೆಂಗಳೂರು: ಮಕ್ಕಳಿಗೆ ಅಂಗನವಾಡಿ ಹಂತದಿಂದಲೇ ವ್ಯವಸ್ಥಿತವಾದ ಶಿಕ್ಷಣ ನೀಡಬೇಕಾಗಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ಬಳಿಕ ರಾಜ್ಯದಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

Advertisement

ಮಲ್ಲೇಶ್ವರದಲ್ಲಿ ಶುಕ್ರವಾರ, ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಷ್ಠಾನ ಹಾಗೂ ಅಕಾಡೆಮಿ ಆಫ್ ಕ್ರಿಯೇಟಿವ್‌ ಲರ್ನಿಂಗ್‌ ವತಿಯಿಂದ ಅಂಗನವಾಡಿ ಶಿಕ್ಷಕಿಯರ ತರಬೇತಿಯ ಮುಕ್ತಾಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು; ಅಂಗನವಾಡಿ ಹಂತದಲ್ಲಿಯೇ ಮಕ್ಕಳಿಗೆ ಭಾಷೆ ಸೇರಿದಂತೆ ಬಹುವಿಷಯಗಳ ಕಲಿಕೆಯ ಶಕ್ತಿ ಹೆಚ್ಚಾಗಿರುತ್ತದೆ ಅಲ್ಲದೆ ಒಂದು ಅಂದಾಜಿನ ಪ್ರಕಾರ ನಾಲ್ಕರಿಂದ ಆರು ವರ್ಷದ ವಯಸ್ಸಿನ ಮಗುವಿಗೆ ಹದಿಮೂರು ಭಾಷೆಗಳನ್ನು ಕಲಿಯುವ ಸಾಮರ್ಥ್ಯ ಕೂಡಾ ಇರುತ್ತದೆ. ಹಾಗಾಗಿ ಮಕ್ಕಳ ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟು ಪುಟ್ಟ ಮಕ್ಕಳಿಗೆ ಬೋಧನೆ ಮಾಡಬೇಕಿದೆ ಎಂದರು.

ನಮ್ಮಲ್ಲಿ ಔಪಚಾರಿಕವಾಗಿ ಶಿಕ್ಷಣ ನೀಡುವ ವ್ಯವಸ್ಥೆ ಈವರೆಗೆ ಇರಲಿಲ್ಲ. ಇದು ಮುಂದೆ ಈ ವ್ಯವಸ್ಥೆ ಆಮೂಲಾಗ್ರವಾಗಿ ಬದಲಾಗಲಿದೆ. ಆರಂಭದ ಹಂತದಲ್ಲಿಯೇ ಮಕ್ಕಳಿಗೆ ಶೈಕ್ಷಣಿಕವಾಗಿ ಗಟ್ಟಿ ತಳಪಾಯ ಬೀಳುವ ಅಗತ್ಯವಿದೆ. ಈ ಬಗ್ಗೆ ಸರಕಾರವೂ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಹೇಳಿದರು.

ಇದನ್ನೂ ಓದಿ:ಮುನಿರತ್ನ ವಿರುದ್ಧ ದಾಖಲೆ ಬಿಡುಗಡೆ ಮಾಡುವುದಿಲ್ಲ: ಡಿಕೆ ಸುರೇಶ್ ಯೂಟರ್ನ್

 

Advertisement
Advertisement

Udayavani is now on Telegram. Click here to join our channel and stay updated with the latest news.

Next