Advertisement
ಬೆಂಗಳೂರಿನಲ್ಲಿ ಗುರುವಾರ(ಮೇ. 13) ಅಧಿಕಾರಿಗಳ ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, “ರಾಜ್ಯದಲ್ಲಿ ಕಿಟ್ ಗಳಿಗೆ ಹೆಚ್ಚು ಬೇಡಿಕೆ ಇದೆ. ಹೀಗಾಗಿ ತಕ್ಷಣವೇ 5 ಲಕ್ಷ ಮೆಡಿಕಲ್ ಕಿಟ್‌ಗಳನ್ನು ಖರೀದಿ ಮಾಡಲು ಸರಕಾರ ನಿರ್ಧರಿಸಿದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಕಿಟ್ ಖರೀದಿ ಮಾಡಲಾಗುವುದು” ಎಂದರು.
Related Articles
Advertisement
ಇನ್ನು, ಸೋಂಕಿನ ಬಗ್ಗೆ ಜನರು ಅಸಡ್ಡೆ ಮಾಡಬಾರದು. ರೋಗ ಲಕ್ಷಣ ಕಂಡು ಬಂದ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ಪಾಸಿಟಿವ್ ಬಂದರೆ ಕ್ಷಣ ಮಾತ್ರವೂ ತಡ ಮಾಡದೇ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಒಂದು ವೇಳೆ ತಡವಾಗಿ, ಸೋಂಕು ಎರಡನೇ ಹಂತಕ್ಕೆ ಬಂದರೆ ಆಕ್ಸಿಜನ್ ಸ್ಯಾಚುರೇಷನ್ ಕಡಿಮೆಯಾಗುವುದು, ಉಸಿರಾಟದ ತೊಂದರೆ ಆಗುವುದು ಇತ್ಯಾದಿ ಗಂಭೀರ ಸಮಸ್ಯೆಗಳು ಎದುರಾಗುತ್ತವೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಪಕ್ಷಗಳ ನಡೆ ಸರಿಯಲ್ಲ :
ಸೋಂಕಿನ ವಿರುದ್ಧ ಸರಕಾರ ಯುದ್ಧೋಪಾದಿಯಲ್ಲಿ ಹೋರಾಟ ನಡೆಸುತ್ತಿದೆ. ಆದರೆ, ಕಷ್ಟಕಾಲದಲ್ಲಿ ಸರಕಾರಕ್ಕೆ ಹೆಗಲು ಕೊಟ್ಟು ಕೆಲಸ ಮಾಡಬೇಕಾದ ಪ್ರತಿಪಕ್ಷಗಳು ಸುಖಾಸುಮ್ಮನೆ ಆರೋಪ ಮಾಡುತ್ತಿವೆ ಎಂದು ದೂರಿದರು.
ಲಸಿಕೆ ಬಂದ ಹೊಸದರಲ್ಲಿ ನಮ್ಮ ಸಂಶೋಧಕರು ಅವಿಶ್ರಾಂತವಾಗಿ ಶ್ರಮಿಸಿ ಕಂಡು ಹಿಡಿದ ಲಸಿಕೆಯ ವಿರುದ್ಧವೇ ಕಾಂಗ್ರೆಸ್ ನಾಯಕರು ಅಪಪ್ರಚಾರ ನಡೆಸಿದರು. ಈಗ ನೋಡಿದರೆ, ಲಸಿಕೆ ಜಪ ಮಾಡುತ್ತಿದ್ದಾರೆ. ಕೇವಲ ರಾಜಕೀಯ ಕಾರಣಗಳಿಗಾಗಿ ಕೋವಿಡ್ ಸಂಕಷ್ಟವನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ ಎಂದು ಅಶ್ವತ್ಥನಾರಾಯಣ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.