Advertisement

ದೇಶವಿರೋಧಿ ಘೋಷಣೆ ಪ್ರಕರಣ ಹೆಚ್ಚಾಗುತ್ತಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಡಿಸಿಎಂ

10:13 AM Feb 23, 2020 | Team Udayavani |

ಬೆಂಗಳೂರು: ದೇಶವಿರೋಧಿ ಘೋಷಣೆ ಕೂಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥನಾರಾಯಣ ಎಚ್ಚರಿಕೆಯ ಮಾತುಗಳನ್ನಾಡಿದರು.

Advertisement

ನಗರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಯುವಕರು, ಯುವತಿಯರು ಇಂಥ ಕೃತ್ಯಗಳಿಗೆ ಮುಂದಾಗುತ್ತಿರುವುದು ದುರದೃಷ್ಟಕರ. ಇದರ ಹಿಂದೆ ಕೆಲವರ ಕೈವಾಡ ಇದ್ದು ಅದರ ಬಗ್ಗೆಯೂ ತನಿಖೆ ನಡೆಯಲಿದೆ ಎಂದು ತಿಳಿಸಿದರು.

ಸಿಎಎ ಅಂದರೆ ಏನು? ಅದರಿಂದಾಗುವ ಪ್ರಯೋಜನಗಳ ಬಗ್ಗೆಯೂ ಸಾರ್ವಜನಿಕರಿಗೆ ತಿಳಿಸುವ ಕೆಲಸವನ್ನೂ ಮಾಡಲಾಗುವುದು ಎಂದು ಹೇಳಿದರು.

ಸಮಾಜದಲ್ಲಿ ವಿನಾಕಾರಣ ಗೊಂದಲ ನಿರ್ಮಾಣ ಮಾಡುತ್ತಿರುವುದು ದುಃಖಕರ. ಎಲ್ಲಾ ಪಕ್ಷಗಳ ಮುಖಂಡರೂ ಇದನ್ನು ಗಮನಿಸಬೇಕು ಎಂದರು.

ಅಮಾಯಕರು, ಮುಗ್ದರಲ್ಲಿ ಗೊಂದಲ ಮೂಡಿಸಬಾರದು. ಪ್ರತಿಭಟನೆ ಸಂವಿಧಾನಿಕ ಹಕ್ಕು, ಆದರೆ ಇಂತಹ ಕೃತ್ಯಗಳು ಆದಾಗ ಸಂಘಟಕರನ್ನು ಗುರ್ತಿಸಿ, ಅವರ ಮೇಲೂ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next