Advertisement

ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡಿ: ಆನಂದ ಸಿಂಗ್‌

09:48 AM Nov 18, 2019 | Team Udayavani |

ಹೊಸಪೇಟೆ: ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ ಸಿಂಗ್‌ ಒತ್ತಾಯಿಸಿದ್ದಾರೆ. ಉಪ ಚುನಾವಣೆ ಅಂಗವಾಗಿ ಭಾನುವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಹಿರಿಯ ನಾಯಕರಾದ ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನದ ಜೊತೆಗೆ ಬಳ್ಳಾರಿ ಉಸ್ತುವಾರಿ ನೀಡಬೇಕು. ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನು ಆನಂದಸಿಂಗ್‌ಗಾಗಿ ಕಾಯ್ದಿರಿಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇವು ಸತ್ಯಕ್ಕೆ ದೂರವಾದ ಮಾತುಗಳು.

Advertisement

ಈಗಲೂ ನಾನು ಶ್ರೀರಾಮುಲು ಅವರಿಗೇ ಉಪಮುಖ್ಯಮಂತ್ರಿ ಸ್ಥಾನದ ಜೊತೆಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ. ಕ್ಷೇತ್ರದ ಯಾವುದೇ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಪಕ್ಷದ ವರಿಷ್ಠರ ಆದೇಶವನ್ನು ಚಾಚೂ ತಪ್ಪದೇ ಪಾಲಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next