ರಾಮನಗರ: ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೂ ಇನ್ನೆರಡು ತಿಂಗಳು ಜಿಲ್ಲಾಡಳಿತ ಮೈಮರೆಯಬಾರದು. ಅಧಿಕಾರಿಗಳುಕೋವಿಡ್ ಕರ್ತವ್ಯ ತಪ್ಪಿಸಿಕೊಳ್ಳಬಾರದು. ಒಂದು ವೇಳೆ ಉಪೇಕ್ಷಿಸಿದರೆ ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿಡಾ.ಸಿ.ಎನ್.ಅಶ್ವತ್ಥನಾರಾಯಣ ಎಚ್ಚರಿಕೆ ನೀಡಿದರು.
ಶನಿವಾರ ಬೆಂಗಳೂರಿನ ಅವರ ಕಚೇ ರಿ ಯಿಂದ ರಾಮನಗರ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಬಗ್ಗೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಉನ್ನತಅಧಿಕಾರಿಗಳು, ತಜ್ಞರ ಜತೆ ವರ್ಚುಯಲ್ ಸಭೆ ನಡೆ ಸಿದ ವೇಳೆ ಅವರು ಮಾತನಾಡಿದರು.
ಇನ್ನು ಎರಡು ತಿಂಗಳು ಎಚ್ಚರದಿಂದಿರಿ: ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುವ ಎಲ್ಲ ಕೋವಿಡ್ ವಾರಿಯರ್‌ಗಳಿಗೆ ಮೊದಲ ಹಂತದಲ್ಲೇ ಲಸಿಕೆ ನೀಡಲಾಗಿದೆ. ಹೀಗಾಗಿ ಜೀವಕ್ಕೆ ಅಪಾಯವಿಲ್ಲ ಎಂದ ಅವರು, ಈಗ ಜನರ ಜೀವಕ್ಕಿಂತ ದೊಡ್ಡ ವಿಷಯ ಬೇರೆ ಇಲ್ಲ. ಸೋಂಕು ಉಲ್ಬಣ ಆಗದ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ,ಇನ್ನೆರಡು ತಿಂಗಳ ಕಾಲ ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳು, ಎಲ್ಲ ಇಲಾಖೆಗಳ ಅಧಿಕಾರಿಗಳೂ ಕೋವಿಡ್ ಕರ್ತವ್ಯದಲ್ಲೇ ತೊಡಗಿಸಿಕೊಳ್ಳಬೇಕು ಎಂದು ಡಿಸಿಎಂ ಸಲಹೆ ನೀಡಿದರು. ಮೊಬೈಲ್ ಕರೆ ಸ್ವೀಕ ರಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.
ಜಿಲ್ಲೆಯಲ್ಲಿ ಬೆಡ್‌ಗಳ ಸಮಸ್ಯೆ ಇಲ್ಲ: ಈಗ ರಾಮನಗರದಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ 200 ಹಾಸಿ ಗೆಗಳು ಸೇರಿ ದಂತೆ 400 ಕೋವಿಡ್ ಹಾಸಿಗೆಗಳಿವೆ. ಜತೆಗೆ, ಪ್ರತಿ ತಾಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ತಲಾ 100 ಹಾಸಿ ಗೆಗಳಿವೆ. ಪ್ರತಿ ತಾಲೂಕು ಆಸ್ಪತ್ರೆಯಲ್ಲೂ ತಲಾ 10 ಹಾಸಿಗೆಗಳಿವೆ. ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ 600 ಬೆಡ್ ಇದೆ. ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ 100 ಬೆಡ್ ಮೀಸಲಿಟ್ಟಿ ದ್ದಾರೆ. ಅಲ್ಲಿ ಇನ್ನೂ 500 ಬೆಡ್ ಪಡೆಯುವ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ. ಇನ್ನು ಹೆಚ್ಚು ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯಲು ಪ್ರಯ ತ್ನಗಳು ಸಾಗಿವೆ ಎಂದು ಡಿಸಿಎಂ ಸ ಭೆಗೆ ಮಾಹಿತಿ ನೀಡಿದರು.
ಬೇಗ ಪರೀಕ್ಷೆ, ಕ್ಷಿಪ್ರ ಫಲಿತಾಂಶ, ತಕ್ಷಣ ಚಿಕಿತ್ಸೆ: ಕೋವಿಡ್ ಸೋಂಕು ಉಲ್ಬಣಗೊಳ್ಳದಂತೆ ಮೂರು ಸೂತ್ರಗಳನ್ನು ಪಾಲಿಸುತ್ತಿರುವುದರ ಬಗ್ಗೆ ಸಚಿ ವರು ಅಧಿಕಾರಿಗಳಿಂದ ಮಾಹಿತ ಸಂಗ್ರ ಹಿಸಿದರು. ರೋಗ ಲಕ್ಷಣ ಕಂಡಾ ಕ್ಷಣ ಸವ್ಯಾಬ್ ಪರೀಕ್ಷೆ, ಕ್ರೀಪ್ರ ಫಲಿತಾಂಶ, ಪಾಸಿಟಿವ್ ಬಂದ ಕ್ಷಣದಲ್ಲೇ ಚಿಕಿತ್ಸೆ ಆರಂಭ ಈ ಮೂರು ಸೂತ್ರ ಗಳು ತಪ್ಪದೆ ಪಾಲನೆಯಾಗಲಿ ಎಂದರು.
ಕೋವಿಡ್ ನಿರ್ವಹಣಾ ತಂಡಗಳು ಪ್ರತಿಮನೆಮನೆಗೂ ಭೇಟಿ ನೀಡಬೇಕು. ಕೆಮ್ಮು, ನೆಗಡಿ,ಶೀತ, ಜ್ವರ, ವಾಸನೆ ಗ್ರಹಿಕೆ ಇಲ್ಲ ದಂತಹ ಯಾವುದೇ ಲಕ್ಷಣ ಕಂಡು ಬಂದರೆ ಅಂಥವರನ್ನು ಕೂಡಲೇಕೋವಿಡ್ ಪರೀಕ್ಷೆಗೆ ಒಳಪಡಿಸಿ, ಒಂದೇ ದಿನದಲ್ಲಿ ಪರೀಕ್ಷೆ, ಫಲಿತಾಂಶ ನೀಡುವುದು, ಚಿಕಿತ್ಸೆಆರಂಭಿಸುವುದು ಆಗಬೇಕು ಎಂದರು.
ವರ್ಚು ಯಲ್ ಸಭೆ ಯಲ್ಲಿ ಸಂಸದ ಡಿ.ಕೆ. ಸುರೇಶ್, ಶಾಸಕರಾದ ಅನಿತಾ ಕುಮಾರಸ್ವಾಮಿ, ಎಸ್.ರವಿ, ಅ.ದೇವೇಗೌಡ, ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್, ಡಿಎಚ್‌ಒ ಡಾ.ನಿರಂಜನ, ಎಸ್ಪಿ ಗಿರೀಶ್ ಮುಂತಾದವರು ಭಾಗವಹಿಸಿದ್ದರು.