ರಾಮನಗರ: ಕಟೀಲ್ ಸ್ವತಃ ಆಡಿಯೋ ತಮ್ಮದಲ್ಲ ಎಂದಿರುವಾಗ ಈ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದರು.
ರಾಮನಗರದ ಜಿಲ್ಕಾಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಉದ್ಘಾಟಿಸಿ ಅವರು ಮಾತನಾಡಿದರು.
ಮುಂದೆಯೇ ಯಡಿಯೂರಪ್ಪ ಅವರೇ ಸಿಎಂ ಆಗಿರುತ್ತಾರೆ. ನಮ್ಮ ಅಧ್ಯಕ್ಷ ಕಟೀಲ್ ಅವರು ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಹರಿದಾಡುತ್ತಿದೆ.
ಇದನ್ನೂ ಓದಿ: ಆಡಿಯೋ ಯಾರು ವೈರಲ್ ಮಾಡಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕು : ಈಶ್ವರಪ್ಪ
ಸಿಎಂ ರಾಜೀನಾಮೆ ನೀಡುತ್ತಾರೆ ಎಂಬುದು ಕೇವಲ ವದಂತಿ ಅಷ್ಟೆ. ನಮ್ಮ ಸರ್ಕಾರ ಎರಡು ವರ್ಷ ಪೂರೈಸಿದ ಸಂಭ್ರಮಾಕ್ಕೆ ತಯಾರಿ ನಡೆಯುತ್ತಿದೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಲಿಲ್ಲ ಎಂದು ಸ್ಪಷ್ಟ ಪಡಿಸಿದರು.
ರಾಜೀವ್ ಗಾಂಧಿ ಆರೋಗ್ಯ ವಿವಿಯ ಕುಲಪತಿಯವರನ್ನು ಜಿಲ್ಲೆಗೆ ಕರೆತಂದು, ವಾಸ್ತವ ತೋರಿಸಲಾಗಿದೆ. ಕೂಡಲೇ ಈ ಕಾಮಗಾರಿಗಳು ಶುರುವಾಗಲಿದೆ ಎಂದರು.