Advertisement
ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಮುಂದಿನ ಐದು ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಈ ಮಾತನ್ನು ಇವತ್ತು ಆತ್ಮವಿಶ್ವಾಸದಿಂದ ಹೇಳುತ್ತಿದ್ದೇನೆ. ಅದಕ್ಕೆ ಅಗತ್ಯವಾದ ಎಲ್ಲ ರೀತಿಯಲ್ಲೂ ಪಕ್ಷವನ್ನು ಬಲಪಡಿಸಲಾಗುವುದು” ಎಂದರು.
Related Articles
Advertisement
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. ಕಳೆದ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆದ್ದಿತ್ತು. 2021ನೇ ಚುನಾವಣೆಯಲ್ಲಿ 75 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದೆ. ಎಲ್ಲಿಯ 3 ಕ್ಷೇತ್ರ, ಎಲ್ಲಿಯ 75. ಒಂದಂಕಿಯಿಂದ ಎರಡಂಕಿ ಸಾಧನೆ ಚಿಕ್ಕದೇನಲ್ಲ. 2026ರ ಚುನಾವಣೆಗೆ ಇದು ಅತ್ಯುತ್ತಮ ಮುನ್ನಡಿಯಾಗಿದೆ ಎಂದರು ಅವರು.
ಅಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ತಮಿಳುನಾಡಿನಲ್ಲಿ ನಾವು ಕಳೆದ ಚುನಾವಣೆಯಲ್ಲಿ ಒಂದು ಸ್ಥಾನವನ್ನೂ ಗೆದ್ದಿರಲಿಲ್ಲ. ಆದರೆ, ಪ್ರಸಕ್ತ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದೇವೆ. ಪುದುಚೆರಿಯಲ್ಲೂ ಪಕ್ಷ ಅತ್ಯುತ್ತಮ ಸಾಧನೆ ಮಾಡಿದೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಸ್ಥಾನ ಬಿಜೆಪಿಗೆ ಸಿಕ್ಕಿದೆ:
ವಿಧಾನಸಭೆ ಉಪ ಚುನಾವಣೆ ನಡೆದ ಎರಡು ಕ್ಷೇತ್ರಗಳ ಪೈಕಿ ಬಸವ ಕಲ್ಯಾಣದಲ್ಲಿ ಬಿಜೆಪಿ ಗೆದ್ದಿದೆ. ಮಸ್ಕಿಯಲ್ಲಿ ಸೋತಿರುವುದಕ್ಕೆ ನಿರಾಶೆ ಇಲ್ಲ. ಯಾಕೆಂದರೆ, ಇವೆರಡೂ ಕ್ಷೇತ್ರಗಳು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದವು ಎಂದ ಅವರು, ಮಸ್ಕಿ ಸೋಲು ಒಬ್ಬರ (ಬಿ.ವೈ.ವಿಜಯೇಂದ್ರ) ತಲೆಗೆ ಕಟ್ಟುವ ಅಗತ್ಯವಿಲ್ಲ. ನಮ್ಮ ಪಕ್ಷದಲ್ಲಿ ಹಾಗೆ ಮಾಡುವುದಿಲ್ಲ. ಚುನಾವಣೆಯಲ್ಲಿ ಇಡೀ ಸಂಘಟನೆ ತೊಡಗಿಸಿಕೊಳ್ಳುತ್ತದೆ. ಸೋಲು ಗೆಲುವು ಎನ್ನುವುದು ಎಲ್ಲರಿಗೂ ಸಂಬಂಧಿಸಿದ್ದು, ಅದಕ್ಕೆ ಎಲ್ಲರೂ ಹೊಣೆಗಾರರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೋವಿಡ್ & ಫಲಿತಾಂಶಕ್ಕೂ ಸಂಬಂಧ ಇಲ್ಲ;
ಮಸ್ಕಿ ಸೋಲು ಹಾಗೂ ಸರಕಾರದ ಕೋವಿಡ್ ನಿರ್ವಹಣೆಗೆ ಸಂಬಂಧ ಇಲ್ಲ. ರಾಜ್ಯಕ್ಕೆ ಮಾತ್ರ ಸೋಂಕು ಬಂದಿಲ್ಲ. ಇಡೀ ಜಗತ್ತಿಗೇ ಸೋಂಕು ಬಂದಿದೆ. ಎಲ್ಲೆಡೆ ಈ ಮಹಾಮಾರಿಯನ್ನು ನಿರ್ವಹಣೆ ಮಾಡಲು ಹೆಣಗಾಡಲಾಗುತ್ತಿದೆ. ಹೀಗಾಗಿ ಕೋವಿಡ್‌ಗೂ ಚುನಾವಣೆಗೂ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದು ಡಿಸಿಎಂ ಅಭಿಪ್ರಾಯಪಟ್ಟರು.