Advertisement

ನವೆಂಬರ್‌ ಒಳಗೆ ರಸ್ತೆ ಗುಂಡಿ ಮುಚ್ಚಲು ಡಿಸಿಎಂ ಗಡುವು

11:03 PM Nov 04, 2019 | Lakshmi GovindaRaju |

ಬೆಂಗಳೂರು: ರಾಜ್ಯಾದ್ಯಂತ ಲೋಕೋಪ ಯೋಗಿ ಇಲಾಖೆ ನಿರ್ವಹಣೆ ವ್ಯಾಪ್ತಿಗೆ ಬರುವ ರಸ್ತೆಗಳಲ್ಲಿ ನವೆಂಬರ್‌ ಒಳಗೆ ಗುಂಡಿ ಮುಚ್ಚಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನೆ ನಡೆ ಸಿದ ಅವರು, ರಸ್ತೆ ಗುಂಡಿ ಮುಚ್ಚುವಲ್ಲಿ ವಿಫ‌ಲರಾ ಗುವ ಅಧಿಕಾರಿಗಳನ್ನು ರಜೆ ಮೇಲೆ ಮನೆಗೆ ಕಳುಹಿಸಿ.

Advertisement

ಅವರ ಸೇವಾವಧಿ ಪುಸ್ತಕದಲ್ಲಿ ಲೋಪ ದಾಖಲಿಸಿ ಎಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ ನೆರೆ ಹಾಗೂ ಪ್ರವಾಹದಿಂದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ಸಾರ್ವಜನಿಕರಿಗೆ ತೊಂದರೆ ಯಾಗಿದೆ. ಇರುವ ಆರ್ಥಿಕ ಮಿತಿಯಲ್ಲಿ ಸ್ಥಳೀಯ ಮಟ್ಟದಲ್ಲಿ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಯನ್ನೇ ಹೊಣೆ ಮಾಡಲಾಗುವುದು ಎಂದರು.

ರಸ್ತೆ, ಸೇತುವೆಗಳ ಅಭಿವೃದ್ಧಿ ಹಾಗೂ ದುರಸ್ತಿಗೆ 1500 ಕೋಟಿ ರೂ. ಕ್ರಿಯಾ ಯೋಜನೆ ತಯಾರಿಸಲಾಗಿದ್ದು, ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ನೆರವೇರಿಸಲಾಗುವುದು. ಪ್ರತಿ ಕಾಮ ಗಾರಿಗೆ ಮುನ್ನ ಆರ್ಥಿಕ ಇಲಾಖೆ ಒಪ್ಪಿಗೆ ದೊರೆತಿದೆಯಾ ಎಂಬುದನ್ನು ಖಾತರಿಪಡಿಸಿಕೊಳ್ಳಿ. ಒಪ್ಪಿಗೆ ಇಲ್ಲದೆ ಯಾವುದೇ ಕಾಮಗಾರಿ ಪ್ರಾರಂಭಿಸಬೇಡಿ ಎಂದು ತಾಕೀತು ಮಾಡಿದರು.

ಪ್ರವಾಸಿ ಮಂದಿರಗಳು ತೀರಾ ಅನಿವಾರ್ಯ ಇರುವ ಕಡೆ ಈ ವರ್ಷ 20 ರಿಂದ 30 ಪ್ರವಾಸಿ ಮಂದಿರ ನಿರ್ಮಾಣಕ್ಕೆ ಯೋಜನೆ ರೂಪಿಸಿ, ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯ ಹಣ ಆಯಾ ವರ್ಷ ಬಳಕೆಗೆ ಕ್ರಮ ಕೈಗೊಳ್ಳಬೇಕು. ಹಣ ವೆಚ್ಚ ಮಾಡಬೇಕೆಂಬ ಕಾರಣಕ್ಕೆ ಯೋಜನೆ ರೂಪಿಸಬಾರದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next