Advertisement

ದ.ಕನ್ನಡದಲ್ಲಿ ನಾವು ಗೆಲ್ಲುವ ಸಾಧ್ಯತೆ ಹೆಚ್ಚಿದೆ: ಹಾಗಾಗಿ ಈ ಸಮಾವೇಶ; ಡಿಕೆ ಶಿವಕುಮಾರ್

01:35 PM Feb 17, 2024 | Team Udayavani |

ಮಂಗಳೂರು: ರಾಜಕೀಯದಲ್ಲಿ ಯಾವುದು ಶಾಶ್ವತ ಹಾಗೂ ಅಸಾಧ್ಯ ಇಲ್ಲ ರಾಜಕಾರಣ ಸಾಧ್ಯತೆಗಳ ಕಲೆ. ಹೀಗಾಗಿ ಇಲ್ಲಿ ಬದಲಾವಣೆ ವಿಶ್ವಾಸವಿದೆ. ಈ ಭಾಗದಲ್ಲಿ ನಾವು ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ಮಂಗಳೂರಿನಲ್ಲಿ ಈ ಬಾರಿ ಸಮಾವೇಶ ಮಾಡುತ್ತಾ ಇದೀವಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

Advertisement

ನಗರದಲ್ಲಿ ಮಾತನಾಡಿದ ಅವರು, ಸಂಜೆ ಏಳು ಗಂಟೆ ಬಳಿಕ ಮಂಗಳೂರು ಡೆಡ್ ಸಿಟಿ ಆಗಿದೆ.ಈ ಜಿಲ್ಲೆಯ ಬಗ್ಗೆ ನಾವು ಹೊಸ ಅಲೋಚನೆ ಮಾಡುತ್ತೇವೆ. ಉದ್ಯೋಗ ಸೃಷ್ಟಿಸುತ್ತೇವೆ. ಇಲ್ಲಿ ನಿರುದ್ಯೋಗ ಇದೆ. ಇಲ್ಲಿನ ಜನ ಬೇರೆ ಕಡೆ ಉದ್ಯೋಗಕ್ಕೆ ಹೋಗುತ್ತಿದ್ದಾರೆ.  ಸೌದಿ, ಬೆಂಗಳೂರು, ಮುಂಬೈ ಕಡೆ ಇಲ್ಲಿನವರು ಹೋಗುತ್ತಿದ್ದಾರೆ. ಇಲ್ಲಿ ಎಷ್ಟೇ ಶಿಕ್ಷಣ ಸಂಸ್ಥೆಗಳಿದ್ದರೂ ಮಕ್ಕಳು ಡ್ರಾಪ್ ಔಟ್ ಆಗುತ್ತಿದ್ದಾರೆ. ಇಲ್ಲಿ ಧರ್ಮ ರಾಜಕೀಯ ಇದೆ. ಬಿಜೆಪಿ ಅಭಿವೃದ್ಧಿ ಮಾಡುತ್ತಿಲ್ಲ ವ್ಯಾಪಾರ ವಹಿವಾಟು ನಡೆದು ಜನರಿಗೆ ಉದ್ಯೋಗ ಸಿಗಬೇಕು. ಇಲ್ಲಿನ ಬ್ಯಾಂಕ್ ಗಳು ಕೂಡ ಇಲ್ಲಿಂದ ಬೇರೆ ಕಡೆ ಹೋಗ್ತಾ ಇದೆ. ದೇವಸ್ಥಾನಗಳಲ್ಲಿ ಭಕ್ತಿಯಿಂದ ಇರ್ತಾರೆ, ಅದೇ ವ್ಯವಹಾರಗಳಲ್ಲೂ ಇರಬೇಕು ಎಂದು ಹೇಳಿದರು.

ಜೆರೋಸಾ ಶಾಲೆ ವಿಚಾರದಲ್ಲಿ ಕಾನೂನು ಪ್ರಕ್ರಿಯೆ ನಡೆಯುತ್ತದೆ. ಯಾರೇ ರಾಜಕೀಯ ಮಾಡಿದರೂ ಕಾನೂನು ಕೆಲಸ ಮಾಡಲಿದೆ. ಅವರು ಹೋರಾಟ ಮಾಡ್ತಾ ಇರಲಿ, ಕಾನೂನು ಕೆಲಸ ಮಾಡುತ್ತದೆ. ನಾನು ಪೊಲೀಸ್ ಕೆಲಸ ಮಾಡಲು ಆಗಲ್ಲ, ಅದನ್ನು  ಪೊಲೀಸರೇ ಮಾಡುತ್ತಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next