Advertisement
ಝೂಮ್ ಮೀಟ್ ಮೂಲಕ ಬಾಗಲಕೋಟೆ ಮತ್ತು ಕಲಬುರಗಿ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕೊರೊನಾ ಸೋಂಕಿತರಿಗೆ ಚಿಕಿತ್ಸೆಗೆ ಪೂರಕವಾಗಿ ಆಕ್ಸಿಜನ್ ಸೇರಿದಂತೆ ಪೂರಕ ಪರಿಕರಗಳ ಸಂಗ್ರಹಿಡಬೇಕು. ಈ ಕುರಿತು ಸರ್ಕಾರದ ಮಟ್ಟದಲ್ಲಿ ಯಾವುದೇ ಪ್ರಸ್ತಾವನೆಗಳಿದ್ದರೂ ಕೂಡಲೇ ಇತ್ಯರ್ಥ ಪಡಿಸಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದರೆ ಗುತ್ತಿಗೆ ಆಧಾರದಡಿ ನೇಮಕ ಮಾಡಿಕೊಳ್ಳಬೇಕು. ಕೊರೊನಾ ತಪಾಸಣಾ ಫಲಿತಾಂಶ ನೀಡಲು ತಡಮಾಡಬಾರದು. ಖಾಸಗಿ ಆಸ್ಪತ್ರೆಗಳ ಸಹಕಾರವನ್ನು ಪಡೆದು ಕೊರೊನಾ ನಿಯಂತ್ರಣಕ್ಕಾಗಿ ಶ್ರಮಿಸಬೇಕು. ಸಹಾಯವಾಣಿ ಕೇಂದ್ರಗಳಲ್ಲಿ ಸಂಪೂರ್ಣ ಮಾಹಿತಿಯನ್ನು ಇಟ್ಟುಕೊಂಡು ಯಾರೇ ಕರೆ ಮಾಡಿದರೂ ಪೂರ್ಣ ಮಾಹಿತಿ ನೀಡಿ ಸಹಕರಿಸುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಡಿಸಿಎಂ ಸೂಚಿಸಿದರು.
Advertisement
ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ : ಜಿಲ್ಲಾಡಳಿತಕ್ಕೆ ಡಿಸಿಎಂ ಸೂಚನೆ
07:56 PM Apr 24, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.