Advertisement

ಶೀಘ್ರದಲ್ಲೇ ಸಂಪುಟ ವಿಸ್ತರಣೆ; ಕಾನೂನಾತ್ಮಕವಾಗಿ ಲಿಂಗಾಯತ ಓಬಿಸಿ ಸೇರ್ಪಡೆ: ಕಾರಜೋಳ

01:45 PM Nov 30, 2020 | keerthan |

ವಿಜಯಪುರ: ರಾಜ್ಯ ಸಂಪುಟ ವಿಸ್ತರಣೆ ಮಾಡಲು ಹೈಕಮಾಂಡ್ ನಿರ್ದೇಶನಕ್ಕಾಗಿ ಕಾಯಲಾಗುತ್ತಿದೆ. ಕೇಂದ್ರ ನಾಯಕರು ಪೂರ್ವ ನಿರ್ಧಾರಿತ ಕಾರ್ಯಕ್ರಮಗಳ ಪ್ರವಾಸದಲ್ಲಿ ಇದ್ದಾರೆ. ಹೈಕಮಾಂಡ್ ಭೇಟಿಗೆ ಹೋಗಿದ್ದ ಸಿಎಂ ಅವರಿಗೆ ವರಿಷ್ಠರು ಉದ್ದೇಶ ಪೂರ್ವಕವಾಗಿ ಭೆಟಿಗರ ಅವಕಾಶ ನೀಡುತ್ತಿಲ್ಲ ಎಂಬುದು ಸರಿಯಲ್ಲ. ಶೀಘ್ರದಲ್ಲೇ ಸಂಪುಟ ವಿಸ್ತರಣೆ ಆಗಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

Advertisement

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹಸಚಿವ ಅಮಿತ್ ಶಾ ಪ್ರವಾಸದಲ್ಲಿದ್ದ ಕಾರಣ ಸಿಎಂ ಭೇಟಿಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಮುಖ್ಯಮಂತ್ರಿ ಬದಲಾವಣೆ ವಿಚಾರ ಮಾಧ್ಯಮಗಳ ಸೃಷ್ಟಿ, ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದರು.

ಲಿಂಗಾಯತ ಸಮುದಾಯಕ್ಕೆ ಓಬಿಸಿ ಮಾನ್ಯತೆ ನೀಡುವ ವಿಚಾರದಲ್ಲಿ ಸಿಎಂ ಅಥವಾ ನಮ್ಮ ಸರಕಾರ ಆತುರದ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿರುವ ನಾವು ಈ ವಿಷಯದಲ್ಲಿ ಸಂವಿಧಾನಾತ್ಮಕ ಹಾಗೂ ಕಾನೂನಾತ್ಮಕ ನಿರ್ಧಾರ ಕೈಗೊಳ್ಳಲಾಗುತ್ತದೆ. ಹೀಗಾಗಿ ಕಾನೂನು ಸಲಹೆ ಪಡೆಯಲಾಗುತ್ತದೆ ಎಂದು ಸಮಜಾಯಿಷಿ ನೀಡಿದರು.

ಇದನ್ನೂ ಓದಿ:ದೆಹಲಿ ನಾಯಕರ ಮುಂದೆ ರಾಜ್ಯದ ನಾಯಕತ್ವ ಬದಲಾವಣೆ ವಿಚಾರವೇ ಇಲ್ಲ: ಅಶೋಕ್

Advertisement

ಅನ್ಯ ಪಕ್ಷಗಳಿಂದ ಬಿಜೆಪಿಗೆ ವಲಸೆ ಬಂದು ತ್ಯಾಗ‌ ಮಾಡಿದವರಿಗೆ ಸಚಿವ ಸ್ಥಾನ ಸಿಗಬೇಕು. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೇಂದ್ರ ನಾಯಕರು ಈ ವಿಷಯದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದ ಬಗ್ಗೆ ನಿಖರವಾಗಿ ನನಗೆ ತಿಳಿದಿಲ್ಲ. ಪ್ರಕರಣವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ರಾಜಕೀಯಕ್ಕೆ ಬಳಸಿಕೊಳ್ಳುವ ಕ್ರಮ ಸರಿಯಲ್ಲ ಎಂದರು.

ಗ್ರಾಮ ಸ್ವರಾಜ್ಯ ಸಮಾವೇಶದ ಮೂಲಕ ರಾಜ್ಯದಲ್ಲಿ ಗ್ರಾ.ಪಂ. ಚುನಾವಣೆಯಲ್ಲಿ ಕಾರ್ಯಕರ್ತರನ್ನು ಗೆಲ್ಲಿಸುವ ಯೋಜನೆ ರೂಪಿಸಲಾಗುತ್ತದೆ. ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯಾದ್ಯಂತ ಗ್ರಾಮ ಸ್ವರಾಜ್ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ವಿಜಯಪುರ ಜಿಲ್ಲೆಯ ನಾಗಠಾಣ ಕ್ಷೇತ್ರದ ಜೆಡಿಎಸ್ ಶಾಸಕ ದೇವಾನಂದ ಚೌಹಾಣ ಜೀವ ಬೆದರಿಕೆ ಇದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಜನರಿಂದ ದೂರವಾಗಿರುವ ಶಾಸಕ ದೇವಾನಂದ ಭ್ರಮೆಯಲ್ಲಿದ್ದಾರೆ. ಶಾಸಕ ದೇವಾನಂದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಹೀಗಾಗಿ ಜೀವಬೆದರಿಕೆ ಎನ್ನುವ ಮೂಲಕ ಜನರ ಅನುಕಂಪ ಗಿಟ್ಡಿಸಲು ಯತ್ನಿಸುತ್ತಿದ್ದಾರೆ. ಇಷ್ಟಕ್ಕೂ ಅವರಿಗೆ ಯಾರಿಂದ ಜೀವ‌ಬೆದರಿಕೆ‌ ಇದೆ ಎಂದು ಪ್ರಶ್ನಿಸಿದರು.

ಕ್ಷೇತ್ರದ ಅಭಿವೃದ್ಧಿಗೆ ಹಣ ತಡೆಯಲಾಗುತ್ತದೆ ಎನ್ನುವ ದೇವಾನಂದ ಆರೋಪ ಆರೋಪ ಅಲ್ಲಗಳೆದ ಕಾರಜೋಳ, ಕಳೆದ 27 ವರ್ಷಗಳಿಂದಲೂ ನಾನು ದೇವಾನಂದ ಅವರನ್ನು ಬಲ್ಲೆ. ಆತ ಹೇಗೆಂದು ನನಗೆ ಚೆನ್ನಾಗಿ ಗೊತ್ತಿದೆ ಎಂದು ಛೇಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next