Advertisement

ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

11:44 AM Feb 07, 2021 | Team Udayavani |

ಬೆಳ್ತಂಗಡಿ: ರಾಜ್ಯ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

Advertisement

ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಕ್ಷೇತ್ರಕ್ಕೆ ಆಗಮಿಸಿದ ಸಚಿವರನ್ನು ಕ್ಷೇತ್ರದ ವತಿಯಿಂದ ಹೆಗ್ಗಡೆ ಆಪ್ತಕಾರ್ಯದರ್ಶಿ ಎ. ವೀ. ಶೆಟ್ಟಿ, ದೇವಳದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ಸ್ವಾಗತಿಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್,  ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಮಹೇಶ್ ಜೆ., ತಾ. ಪಂ.ಇ.ಒ. ಕುಸುಮಾಧರ್ ಕೆ., ಲೋಕೋಪಯೋಗಿ ಇಲಾಖೆ ಕಾರ್ಯನಿವಾಹಕ ಎಂಜಿನಿಯರ್ ಶಿವಪ್ರಸಾದ್ ಅಜಿಲ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಮತ್ತಿತರರು ಉಪಸ್ಥಿತರಿದ್ದರು.

Advertisement

ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಧರ್ಮಸ್ಥಳ ಭೇಟಿನೀಡಿದರು. ಸಚಿವರು ಧರ್ಮಸ್ಥಳದಲ್ಲಿ 15 ಕೋ.ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆ ಲೋಕಾರ್ಪಣೆ, ಚಾರ್ಮಾಡಿ ಅನಾರು ಸೇತುವೆ ಶಿಲಾನ್ಯಾಸ ಬಳಿಕ ಬೆಳ್ತಂಗಡಿ ಐ.ಬಿ.ಶಿಲಾನ್ಯಾಸ ನಡೆಸಲಿರುವರು.

ಬಳಿಕ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಮಂಜುನಾಥೇಶ್ವರ ಕಲಾಭವನದಲ್ಲಿ ಸಚಿವರಿಗೆ ಅಭಿನಂದನೆ ಕಾರ್ಯಕ್ರ‌ಮ ನಡೆಯಲಿದೆ. ಮಧ್ಯಾಹ್ನ ಭೋಜನದ ಬಳಿಕ ಕುಕ್ಕುಜೆ ಸೇತುವೆ ಶಿಲಾನ್ಯಾಸ ನೆರವೇರಿಸಿ ಮಂಗಳೂರಿಗೆ ಪಯಣ ಬೆಳೆಸುವರು.

Advertisement

Udayavani is now on Telegram. Click here to join our channel and stay updated with the latest news.

Next