Advertisement
ಮುಂಗಾರು ಮಳೆಯಿಂದ ತೊಂದರೆಗೊಳಗಾದ ಪ್ರದೇಶಗಳಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಚಿಕ್ಕೋಡಿ ಉಪವಿಭಾಗ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಂತ ಹಂತವಾಗಿ ನೀರು ಬಿಡುಗಡೆಗೆ ಮಹಾರಾಷ್ಟ್ರ ಸರಕಾರ ಸಹಮತ ವ್ಯಕ್ತಪಡಿಸಿದೆ. ಪ್ರವಾಹ ಪರಿಸ್ಥಿತಿ ಉದ್ಭವಿಸಿದರೆ ನದಿತೀರದ ಜನರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
Related Articles
Advertisement
ನೆರೆ ರಾಜ್ಯದ ಗಡಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ಈ ಬಾರಿ ಕೂಡ ಸಮಸ್ಯೆ ಉದ್ಭವಿಸದಂತೆ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಈಗಾಗಲೇ ಕಾಳಜಿ ಕೇಂದ್ರಕ್ಕಾಗಿ ಗುರುತಿಸಲಾಗಿರುವ ಯಾವುದಾದರೂ ಶಾಲಾ ಕಟ್ಟಡಗಳು ಶಿಥಿಲಗೊಂಡಿದ್ದರೆ ಅವುಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಚಿಕ್ಕೋಡಿ ಉಪ ವಿಭಾಗದಲ್ಲಿ ಇದುವರೆಗೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್, ಜೂನ್ ತಿಂಗಳಲ್ಲಿ ಒಟ್ಟಾರೆ ವಾಡಿಕೆ ಮಳೆಗಿಂತ ಶೇ.94 ಅಧಿಕ ಮಳೆಯಾಗಿದೆ. ಸದ್ಯಕ್ಕೆ ಕೇವಲ 67 ಕ್ಯೂಸೆಕ್ ನೀರಿನ ಹರಿವು ಇದೆ. ಎರಡೂವರೆ ಲಕ್ಷ ಕ್ಯೂಸೆಕ್ ನೀರಿನ ಹರಿವು ಇದ್ದರೆ ಮಾತ್ರ ಪ್ರವಾಹ ಸ್ಥಿತಿ ಉದ್ಭವಿಸುತ್ತದೆ ಎಂದು ತಿಳಿಸಿದರು. ಎಲ್ಲ ತಾಲೂಕುಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್. ಎಫ್. ತಂಡಗಳನ್ನು ನಿಯೋಜಿಸಲಾಗಿದೆ. ನುರಿತ ಈಜುಗಾರರನ್ನು ಗುರುತಿಸಲಾಗಿದ್ದು, ಅಗತ್ಯತೆ ಆಧರಿಸಿ ಅವರ ಸೇವೆಯನ್ನು ಪಡೆದುಕೊಳ್ಳಲಾಗುವುದು ಎಂದರು. ಇತ್ತೀಚೆಗೆ ಸುರಿದ ಮಳೆಯಲ್ಲಿ 43 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಚಿಕ್ಕೋಡಿ ಉಪ ವಿಭಾಗದಲ್ಲಿ 168 ಕಾಳಜಿ ಕೇಂದ್ರಗಳನ್ನು ಸಿದ್ಧಪಡಿಸಲಾಗಿಟ್ಟುಕೊಳ್ಳಲಾಗಿದೆ ಎಂದು ಯುಕೇಶ್ ಕುಮಾರ್ ಹೇಳಿದರು.
ಸಭೆಯಲ್ಲಿ ಜವಳಿ ಮತ್ತು ಕೈಮಗ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ, ರಾಜ್ಯಸಭೆ ಸದಸ್ಯ ಈರಣ್ಣಾ ಕಡಾಡಿ, ಶಾಸಕ ಮಹೇಶ ಕುಮಟೊಳ್ಳಿ, ಜಿಪಂ ಸಿಇಒ ದರ್ಶನ್ ಎಚ್ .ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿಡಿಪಿಐ ಗಜಾನನ ಮನ್ನಿಕೇರಿ, ಡಿವೈಎಸ್‌ಪಿ ಮನೋಜ ನಾಯಿಕ, ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.