Advertisement

ಅರಣ್ಯದೊಳಗಿನ ಜನವಸತಿ ಪ್ರದೇಶಗಳಲ್ಲಿ ಮೂಲಭೂತ‌ ಸೌಕರ್ಯ ಅಭಿವೃದ್ಧಿಗೆ ಡಿಸಿಎಂ ಸೂಚನೆ

03:56 PM Jul 17, 2020 | keerthan |

ಬೆಂಗಳೂರು: ಅರಣ್ಯದೊಳಗಿನ ಹಾಗೂ ಅರಣ್ಯದಂಚಿನ ಗ್ರಾಮಗಳಲ್ಲಿ ಹಾಗೂ ಜನವಸತಿ ಪ್ರದೇಶಗಳಲ್ಲಿ ಅರಣ್ಯ ಹಕ್ಕು ಅಧಿನಿಯಮದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲು ಅನುಮತಿ ನೀಡಲು ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

Advertisement

ವಿಕಾಸಸೌಧ ದಲ್ಲಿ ಅರಣ್ಯ ಹಕ್ಕು ಅಧಿನಿಯಮ ಅನುಷ್ಠಾನ ಕುರಿತು ನಡೆದ   ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರಣ್ಯ ಹಕ್ಕಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಕ್ರಮಕೈಗೊಳ್ಳಬೇಕು. ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಾಕಿ ಇರುವ ಸಮುದಾಯ ಅರಣ್ಯ ಹಕ್ಕು ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ಲ್ಯಾಂಪ್ಸ್ ಸಹಕಾರ ಸಂಘಗಳಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುತಿಸಲಾಗಿರುವ 123 ಎಕರೆ ಜಮೀನನ್ನು ಉದ್ದೇಶಿತ ಯೋಜನೆಗಾಗಿ ಸದ್ಬಳಕೆಯಾಗುವಂತೆ ಕ್ರಮಕೈಗೊಳ್ಳಬೇಕು. ಗ್ರಾಮ ಮಟ್ಟದ ಅರಣ್ಯ ಹಕ್ಕು ಸಮಿತಿ ಸುಗಮವಾಗಿ ಕಾರ್ಯನಿರ್ವಹಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು. ಬಾಗಲಕೋಟೆ ಜಿಲ್ಲೆಯ ಮುಧೋಳ್, ಬೀಳಗಿ ಹಾಗು ಜಮಖಂಡಿ ತಾಲೂಕುಗಳಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ‌ಸಿರುವವರ ಜಮೀನುಗಳಲ್ಲಿ ಪಾಲಿಗಾನ್ಸ್ ಒದಗಿಸುವಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಡಿಸಿಎಂ ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಕುಮಾರ ನಾಯಕ್, ಎಸ್ ಸಿಪಿ ಮತ್ತು ಟಿಎಸ್ ಪಿ ಯೋಜನೆಯ ಸಲಹೆಗಾರರಾದ ಶ್ರೀ ಇ.ವೆಂಕಟಯ್ಯ, ಅರಣ್ಯ ‌ಇಲಾಖೆಯ ಅಪರ‌ ಮುಖ್ಯಕಾರ್ಯದರ್ಶಿ ಶ್ರೀ ಸಂದೀಪ ದವೆ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಶ್ರೀ ಸಂಗಪ್ಪ,  ಡಿಸಿಎಂ ಅವರ ಆಪ್ತ ಕಾರ್ಯದರ್ಶಿ ಶ್ರೀ ವಿ.ಶ್ರೀನಿವಾಸ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next