Advertisement

ಕಲಬುರಗಿ-ಬಾಗಲಕೋಟೆಯಲ್ಲಿ ಮದುವೆ ಸಮಾರಂಭ ನಿಷೇಧಿಸಿ ಡಿಸಿಎಂ ಕಾರಜೋಳ ಆದೇಶ

03:19 PM Jul 06, 2020 | keerthan |

ಕಲಬುರಗಿ: ಕೋವಿಡ್ ಸೋಂಕು ನಿಯಂತ್ರಣ ನಿಟ್ಟಿನಲ್ಲಿ ಮದುವೆ ಸಮಾರಂಭಗಳಿಗೆ ಅನುಮತಿ ನೀಡದಂತೆ ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲಾಡಳಿತಗಳಿಗೆ ಉಪ ಮುಖ್ಯಮಂತ್ರಿ ಸಚಿವ ಗೋವಿಂದ ಕಾರಜೋಳ ಆದೇಶ ಹೊರಡಿಸಿದ್ದಾರೆ.

Advertisement

ವಿವಾಹ ಸಮಾರಂಭದಲ್ಲಿ ಭಾಗವಹಿಸಿದ ಜನರಿಗೆ ಹೆಚ್ಚಾಗಿ ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಜನ ಸೇರುವ ಮದುವೆ ಸಮಾರಂಭಗಳಿಗೆ ಅನುಮತಿ ನೀಡದಂತೆ ಎರಡೂ ಜಿಲ್ಲೆಗಳ ಉಸ್ತುವಾರಿ ಸಚಿವರೂ ಆಗಿರುವ ಕಾರಜೋಳ ಪತ್ರದ ಮೂಲಕ ಸೂಚಿಸಿದ್ದಾರೆ.

ಸಮಾರಂಭಗಳಿಗೆ ಪರ್ಯಾಯವಾಗಿ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮದುವೆ ಕಾರ್ಯಗಳನ್ನು ನಡೆಸಲು ಮಾತ್ರ ಅನುಮತಿ ನೀಡುವಂತೆ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಡಿಸಿಎಂ ಸಲಹೆ ‌ನೀಡಿದ್ದಾರೆ.

ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ, ಕೋವಿಡ್ ನಿಯಂತ್ರಣಕ್ಕೆ ಬಾರದಿರುವುದು ಆತಂಕಕಾರಿ ಸಂಗತಿಯಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಭಾಗವಹಿಸುತ್ತಿದ್ದಾರೆ. ಇದರ ಪರಿಣಾಮದಿಂದ ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರಿಗೂ ಸೋಂಕು ಹರಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಆ ಕಾರಣಕ್ಕಾಗಿ ಜಿಲ್ಲೆಯಲ್ಲಿ ಇನ್ನು ಮುಂದೆ ಜನ ಸೇರಿಸಿ ಮದುವೆ ಸಮಾರಂಭಗಳನ್ನು ಆಚರಿಸಲು ಅನುಮತಿ ನೀಡಬಾರದು ಎಂದು ಕಾರಜೋಳ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next