ದಾವಣಗೆರೆ: ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿಗಳು ಬಂದು ಹೇಳಿದರೂ ಬೆಳಗಾವಿ, ನಿಪ್ಪಾಣಿ ಕರ್ನಾಟದಲ್ಲೇ ಇರುತ್ತದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ- ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಬೇಕು ಎನ್ನುವ ಉದ್ದವ್ ಠಾಕ್ರೆ ಹೇಳಿಕೆ ವಿರುದ್ಧ ಕಿಡಿಕಾರಿದರು.
ಉದ್ದವ್ ಠಾಕ್ರೆ ಅವರ ಹೇಳಿಕೆ ರಾಜಕೀಯ ಪ್ರೇರಿತ. ಇದೊಂದು ಅವಿವೇಕತನದ ಹೇಳಿಕೆ. ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ ಎಂದರು.
ಇದನ್ನೂ ಓದಿ:ದೇಶದ ಏಕತೆಗೆ ಮಾರಕ: ಉದ್ಧವ್ ಠಾಕ್ರೆ ಮಾತಿಗೆ ಯಡಿಯೂರಪ್ಪ ಖಂಡನೆ
ಹಿರಿಯರು ಸಚಿವ ಸ್ಥಾನ ತ್ಯಾಗ ಮಾಡಬೇಕು ಎಂಬ ರೇಣುಕಾಚಾರ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ. ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಆದರೆ ಕೇಳುವುದನ್ನು ಪಕ್ಷದ ಚೌಕಟ್ಟಿನಲ್ಲಿ ಕೇಳಲಿ. ರಾಜ್ಯಾಧ್ಯಕ್ಷರ ಮೂಲಕ ಅಭಿಪ್ರಾಯಗಳು ಬರಲಿ ಎಂದು ಡಿಸಿಎಂ ಹೇಳಿದರು.