ಅಥಣಿ: ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೆಲವು ಅಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು. ಇದು ಪಕ್ಷದಲ್ಲಿ ಸಹಜವಾಗಿಯೇ ನಡೆಯುವ ಪ್ರಕ್ರಿಯೆ ಎಲ್ಲವೂ ಸರಿಯಾಗುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರಿಗೆ ಟಿಕೆಟ್ ನೀಡಿದ್ದಕ್ಕೆ ಕೆಲವರು ಸಹಜವಾಗಿ ರಾಜಕಾರಣದಲ್ಲಿ ಸ್ವಲ್ಪ ಮಟ್ಟಿಗೆ ಅಸಮಾಧಾನ ಮೂಡುವುದು ಸಹಜ. ಶರಣು ಸಲಗರ ಅ ಧಿಕ ಮತಗಳಿಂದ ಗೆಲುವು ಸಾಧಿಸುತ್ತಾರೆ. ನಿಜವಾದ ಬಿಜೆಪಿ ಕಾರ್ಯಕರ್ತರು ಯಾರೂ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲ್ಲ. ಬಂಡಾಯವಾಗಿ ಉಪ ಚುನಾವಣೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದರು.
ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಖಾಲಿ ಇರುವುದು ಮತ್ತು ಇನ್ನೂ ಕೆಲವು ಸಚಿವ ಸ್ಥಾನಗಳು ಖಾಲಿ ಇವೆ. ಯಾವಾಗ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ. ಆವಾಗ ವರಿಷ್ಠರು ಯಾರಿಗೆ ನೀಡಬೇಕೆಂದು ತಿಳಿಸುತ್ತಾರೆಂದು ಪ್ರತಿಕ್ರಿಯಿಸಿದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಇಲ್ಲದೆ ಇರುವುದರಿಂದ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬಿರುವುದಿಲ್ಲ ಮತ್ತು ಬೆಳಗಾವಿ, ರಾಯಚೂರು ಎರಡು ಕಡೆ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಸವದಿ ಹೇಳಿದರು.
ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಪ್ರಬಲ ಕಾಂಗ್ರೆಸ್ ಅಭ್ಯರ್ಥಿ ಎಂಬುದನ್ನು ಇಲ್ಲಿ ಪ್ರಶ್ನೆಯಲ್ಲ. ಬಿಜೆಪಿ ಎದುರು ರಾಹುಲ್ ಗಾಂಧಿ , ಸೋನಿಯಾ ಗಾಂ ಧಿ ಸ್ಪರ್ಧೆ ಮಾಡಿದರು ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ. ದೇಶದ ಪ್ರಧಾನಿ ನರೇಂದ್ರ ಮೋದಿ ಶಕ್ತಿ ಹೆಚ್ಚಿಸಲು ಮತದಾರರ ಪ್ರಭು ಆಶೀರ್ವಾದ ಮಾಡುತ್ತಿದ್ದಾರೆ. ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಮತತದ ಅಂತರದಲ್ಲಿ ಗೆಲುವು ಸಾಧಿ ಸಲಿದೆ ಎಂದು ತಿಳಿಸಿದರು.
ಪ್ರತಿಭಟನೆ ಕೈ ಬಿಡುವಂತೆ ಮನವಿ: ಮುಂಬರುವ ಏ.7ರಂದು ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿವೆ ಎಂದು ಈಗಾಗಲೇ ಸೂಚನೆ ನೀಡಿದ್ದಾರೆ, ಯಾವುದೇ ಕಾರಣಕ್ಕೂ ಪ್ರತಿಭಟನೆ ನಡೆಸದಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ನೌಕರರಿಗೆ ವಿನಂತಿ ಮಾಡಿಕೊಂಡರು. ಈಗಾಗಲೇ ರಾಜ್ಯ ಸರ್ಕಾರ ಸಾರಿಗೆ ನೌಕರರ ಹಲವು ಬೇಡಿಕೆ ಈಡೇರಿಸಿದೆ. ಸಾರಿಗೆ ನೌಕರ ಪ್ರಮುಖ 9 ಬೇಡಿಕೆಯಲ್ಲಿ 8 ಬೇಡಿಕೆ ನೀಡಲಾಗಿದೆ. ಕೊರೊನಾ ಸಂದರ್ಭದಲ್ಲಿ ಸಾರ್ವಜನಿಕ ತೊಂದರೆ ಉಂಟು ಮಾಡುವ ಕಾರ್ಯಕ್ಕೆ ಮುಂದಾಗಬೇಡಿ. ಸಮಸ್ಯೆಗಳಿಗೆ ಪ್ರತಿಭಟನೆ ಒಂದೇ ಮಾರ್ಗವಲ್ಲ. ಸರ್ಕಾರ ಸಾರಿಗೆ ನೌಕರರ ಪರವಾಗಿ ಇರುವುದು. ಸಾರಿಗೆ ಇಲಾಖೆ ನೌಕರರಿಗೆ ಸದ್ಯದಲ್ಲೇ 6ನೇ ವೇತನ ಆಯೋಗ ಜಾರಿ ಮಾಡಲಾಗುವುದು ಎಂದು ತಿಳಿಸಿದರು.