Advertisement

ಬೆಂಗಳೂರು ಅಭಿವೃದ್ಧಿ ಕುರಿತು ಡಿಸಿಎಂ ಸಭೆ

12:00 PM Jun 10, 2018 | Team Udayavani |

ಬೆಂಗಳೂರು: ರಾಜಧಾನಿಯಲ್ಲಿ ನೀರು ಪೂರೈಕೆ, ಮಳೆ ಅವಾಂತರ ಸೇರಿದಂತೆ ಇತರ ಸಮಸ್ಯೆಗಳು ಮತ್ತು ಅವುಗಳ ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು, ಶನಿವಾರ ವಿಧಾನಸೌಧದಲ್ಲಿ ಮೇಯರ್‌, ಬಿಡಿಎ ಮತ್ತು ಜಲಮಂಡಳಿ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ.

Advertisement

ಗೃಹ ಖಾತೆ ಜತೆಗೆ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೂ ಹೊಂದಿರುವ ಡಾ.ಪರಮೇಶ್ವರ್‌, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಯೋಜನೆಗಳು, ಅವುಗಳ ಪ್ರಗತಿ,  ಬೆಂಗಳೂರಿಗೆ ನೀರು ಪೂರೈಕೆ, ಮಳೆ ಅವಾಂತರಗಳ ತಡೆಗೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಹಲವು ನಿರ್ದೇಶಗಳನ್ನು ನೀಡಿದ್ದಾರೆ.

ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಗುಂಡಿ ಬಿದ್ದು ಹಾಳಾಗಿರುವ ಬೆಂಗಳೂರಿನ ರಸ್ತೆಗಳನ್ನು ಶೀಘ್ರ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು. ಅದೇ ರೀತಿ ತ್ಯಾಜ್ಯ ವಿಲೇವಾರಿ ಬಗ್ಗೆಯೂ ಗಮನಹರಿಸಬೇಕು. ಇದರೊಂದಿಗೆ ಆಯಾ ಸ್ಥಳೀಯ ಸಂಸ್ಥೆ ಮತ್ತು ಪ್ರಾಧಿಕಾರಗಳಿಂದ ಸಾರ್ವಜನಿಕರಿಗೆ ಅಗತ್ಯ ಸೌಕರ್ಯ ಒದಗಿಸಬೇಕು ಎಂದು ಸೂಚನೆ ನೀಡಿದರು.

ಬೆಂಗಳೂರಿನ ನೀರು ಪೂರೈಕೆ, ವಸತಿ ಹಂಚಿಕೆ ಸೇರಿದಂತೆ ಬಿಡಿಎ ಮತ್ತು ಜಲಮಂಡಳಿ ಕೆಲಸಗಳು, ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಡಿಸಿಎಂ, ಬೆಂಗಳೂರಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು, ಪ್ರಾಧಿಕಾರಗಳ ಸಭೆಯನ್ನು ಶೀಘ್ರವೇ ಕರೆಯುವುದಾಗಿ ತಿಳಿಸಿದರು.

ಮೇಯರ್‌ ಸಂಪತ್‌ರಾಜ್‌, ಶಾಸಕರಾದ ಮುನಿರತ್ನ, ಭೈರತಿ ಬಸವರಾಜ್‌, ಭೈರತಿ ಸುರೇಶ್‌, ಎಸ್‌.ಟಿ.ಸೋಮಶೇಖರ್‌, ಬಿಡಿಎ ಆಯುಕ್ತ ರಾಕೇಶ್‌ ಸಿಂಗ್‌, ಜಲಮಂಡಳಿ ಅಧ್ಯಕ್ಷ ತುಷಾರ್‌ ಗಿರಿನಾಥ್‌ ಮತ್ತಿತರರು ಸಭೆಯಲ್ಲಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next