ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ವಿಧಾನಸೌಧದ 3 ನೇ ಮಹಡಿಯ ಕಚೇರಿಯಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ.
Advertisement
ಪೊಲೀಸರ ಬಿಗಿ ಭದ್ರತೆಯಲ್ಲಿ ಪರಮೇಶ್ವರ್ ಅವರ ಪತ್ನಿ ಕನ್ನಿಕಾ ಅವರು 3 ನೇ ಮಹಡಿಯ ಕೊಠಡಿ ಸಂಖ್ಯೆ 327 , 328 ರಲ್ಲಿ ನಡೆದ ಪೂಜಾ ಕ್ರಮಗಳಲ್ಲಿ ಭಾಗಿಯಾಗಿದ್ದು, ಅರ್ಚಕರು ವಿಧಿ ವಿಧಾನಗಳನ್ನು ನಡೆಸಿದ್ದಾರೆ. ವಾಸ್ತು ಪೂಜೆ ನಡೆಸಲಾಗಿದೆ ಎಂದು ವರದಿಯಾಗಿದೆ.
ನಾಳೆ ದೆಹಲಿಗೆ
ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಇತರ ಕಾಂಗ್ರೆಸ್ ನಾಯಕರೊಂದಿಗೆ ದೆಹಲಿಗೆ ತೆರಳಲಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಚಿವ ಸಂಪುಟದ ಸ್ಥಾನ ಹಂಚಿಕೆಯನ್ನು ಅಂತಿಮಗೊಳಿಸಲಿದ್ದಾರೆ.