Advertisement

ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿ ಸ್ಥಾಪಿಸಲು ಡಿಸಿಎಂ ಸವದಿ ಮನವಿ

02:38 PM Nov 16, 2020 | Suhan S |

ಬೆಂಗಳೂರು : ವೀರಶೈವ ಲಿಂಗಾಯತರ ಸಮುದಾಯದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಮತ್ತು ಹಿಂದುಳಿದವರು ಸೇರಿರುವುದರಿಂದ ಅವರಿಗೆ ಅನುಕೂಲ ಕಲ್ಪಿಸುವಂತಾಗಲು ಪ್ರತ್ಯೇಕ ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಬೇಕೆಂದು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡರು.

Advertisement

ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸುವುದರಿಂದ ಸಾಮಾಜಿಕವಾಗಿ,  ಆರ್ಥಿಕವಾಗಿ  ಮತ್ತು  ಶೈಕ್ಷಣಿಕವಾಗಿ ಈ ಸಮುದಾಯದ ಬಡವರಿಗೆ ಮತ್ತು ಹಿಂದುಳಿದವರಿಗೆ ಅನುಕೂಲ ಸಿಗುವಂತಾಗಿ ಸಾಮಾಜಿಕ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಸವದಿ ಅವರು ಮನವರಿಕೆ ಮಾಡಿಕೊಟ್ಟರು.

ಸಚಿವರಾದ  ಸೋಮಣ್ಣ, ಬಿ.ಸಿ. ಪಾಟೀಲ್, ಸೇಡಂ ಶಾಸಕರಾದ ರಾಜಶೇಖರ್ ಪಾಟೀಲ್ ತೆಲ್ಕೂರ್ ಮುಂತಾದವರು ಈ ಸಂದರ್ಭದಲ್ಲಿ  ಸವದಿಯವರ ಜೊತೆಗಿದ್ದರು.

ಮರಾಠ ಸಮುದಾಯದವರಿಗೆ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ಡಿಸಿಎಂ ಸವದಿ ಸ್ವಾಗತ : 

ಮರಾಠ ಸಮುದಾಯದವರಿಗೆ ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದರಿಂದ ಸಾಮಾಜಿಕ ಸಮಾನತೆಗೆ ಅವಕಾಶವಾಗುತ್ತದೆ, ಈ ಸಮುದಾಯದಲ್ಲಿ ಅತ್ಯಂತ ಬಡವರು ಮತ್ತು ಹಿಂದುಳಿದವರಿದ್ದಾರೆ ಅವರ ಸಮಗ್ರ ಅಭಿವೃದ್ಧಿಗೆ ಈ ನಿಗಮದ ಸ್ಥಾಪನೆ ಸೂಕ್ತ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರು ಸಮರ್ಥಿಸಿದ್ದಾರೆ.

Advertisement

ಸನ್ಮಾನ್ಯ ಮುಖ್ಯಮಂತ್ರಿಯವರಾದ ಬಿ.ಎಸ್. ಯಡಿಯೂರಪ್ಪ ಅವರು ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕೈಗೊಂಡ ನಿರ್ಧಾರವನ್ನು ಸ್ವಾಗತಿಸಿದ ಅವರು ಮರಾಠ ಎಂದಾಕ್ಷಣ ಕೇವಲ ಭಾಷೆಯ ಆಧಾರದಲ್ಲಿ ಪರಿಗಣಿಸುವುದು ಸರಿಯಲ್ಲ. ಇದು ಸಮುದಾಯದ ಅಭಿವೃದ್ಧಿಯ ವಿಷಯವಾಗಿರುವುದರಿಂದ ಮತ್ತು ಈ ನಿಗಮವನ್ನು ಸ್ಥಾಪಿಸಬೇಕೆಂದು ಹಲವು ವರ್ಷಗಳಿಂದ ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಅತ್ಯಂತ ಸಮರ್ಪಕವಾಗಿದೆ ಎಂದು ಸವದಿ ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next