Advertisement

ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸವದಿ ಪತ್ರ

11:55 AM May 17, 2020 | keerthan |

ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ರದ್ದಾಗಿರುವ ಸಾರಿಗೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲು ಅವಕಾಶ ನೀಡಬೇಕೆಂದು ರಾಜ್ಯದ ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದಿದ್ದಾರೆ.

Advertisement

ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಪತ್ರ ಬರೆದಿರುವ ಸವದಿ, ಲಾಕ್ ಡೌನ್ ಕಾರಣದಿಂದ ರಾಜ್ಯದ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗಗಳಿಗೆ ಒಟ್ಟು ಇದುವರೆಗೆ 1600 ಕೋಟಿ. ರೂ ನಷ್ಟವಾಗಿದೆ ಎಂದಿದ್ದಾರೆ.

ಹವಾನಿಯಂತ್ರಿತವಲ್ಲದ ಬಸ್ ಗಳನ್ನು ರಸ್ತೆಗಳಿಯಲು ಅವಕಾಶ ನೀಡಬೇಕು, ಬಸ್ ಗಳಲ್ಲಿ ಕುಳಿತುಕೊಳ್ಳುವ ಸಾಮರ್ಥ್ಯದಷ್ಟು ಜನರಿಗೆ ಪ್ರಯಾಣಿಸುವವರಿಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ ಬೇಡಿಕೆಯನ್ನು ಪೂರೈಸಲು ಇನ್ನಷ್ಟು ಬಸ್ ಗಳನ್ನು ರಸ್ತೆಗಿಳಿಸಬೇಕಾಗಬಹುದು. ಆದರೆ ಅದು ಸದ್ಯಕ್ಕೆ ಸಾಧ್ಯವಿಲ್ಲ ಎಂದು ಸವದಿ ಪತ್ರದಲ್ಲಿ ಬರೆದಿದ್ದಾರೆ.

ಲಾಕ್ ಡೌನ್ ತೆರವುಗೊಳಿಸುವಾಗ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಲಕ್ಷ್ಮಣ ಸವದಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next