Advertisement

ಸಮ್ಮೇಳನ ಯಶಸ್ವಿ, ಶ್ರೇಯಸ್ಸು ತರುವಂತೆ ಶ್ರಮಿಸಲು ಅಧಿಕಾರಿಗಳಿಗೆ ಡಿಸಿಎಂ ತಾಕೀತು

12:33 PM Dec 12, 2019 | Suhan S |

ಕಲಬುರಗಿ: ಫೆಬ್ರವರಿ 5 ರಿಂದ ಕಲಬುರಗಿಯಲ್ಲಿ ನಡೆಯಲಿರುವ ಅಖಿಲ ಭಾರತ 85 ನೇಯ ಸಮ್ಮೇಳನಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮ್ಮೇಳನ ಯಶಸ್ವಿಯಾಗಿ ನೆರವೇರುವ ನಿಟ್ಟಿನಲ್ಲಿ ಶ್ರಮಿಸುವಂತೆ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಾಕೀತು ಮಾಡಿದರು.

Advertisement

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಲಬುರಗಿ ಸಮ್ಮೇಳನ ಯಶಸ್ವಿ ಶ್ರೇಯಸ್ಸು ಆಗಲು ಮಹತ್ವ ಕೊಡಿ. ಬಹು ಮುಖ್ಯವಾಗಿ ವಹಿಸಿ ಕೊಡಲಾಗುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದರು.

ತೊಗರಿ ಖರೀದಿಗೆ ಸಂಬಂಧಿಸಿದಂತೆ ಡಿ. 13 ರಂದು ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸುತ್ತಿರುವುದಾಗಿ ಡಿಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು. ಸರ್ಕಾರಿ ಕಾರ್ಯಕ್ರಮ ಹಾಗೂ ಸಭೆಗಳಲ್ಲಿ ಶಿಷ್ಟಾಚಾರ ನಿಯಮ ಕಡ್ಡಾಯವಾಗಿ ಪಾಲಿಸಬೇಕೆಂದು ಡಿಸಿಎಂ ಕಾರಜೋಳ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಅವರು ತಮ್ಮ ತಾಲ್ಲೂಕಿನ ಲ್ಲಿ ಅದರಲ್ಲೂ ದೇವಲ್ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದ ಅಭಿವೃದ್ಧಿ ಸಂಬಂಧ ಸಭೆಗೆ ತಮ್ಮನ್ನು ಆಹ್ವಾನಿಸದೇ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.

15
ತಿಂಗಳ ನಂತರ ಕೆಡಿಪಿ: ಉಪಮುಖ್ಯಮಂತ್ರಿ ‌ಕಾರಜೋಳ ಅಧ್ಯಕ್ಷತೆಯಲ್ಲಿ ‌ ಸುಮಾರು 15 ತಿಂಗಳ ಬಳಿಕ ಇಲ್ಲಿನ ಜಿಲ್ಲಾಧಿಕಾರಿ ‌ಕಚೇರಿಯ ಸಭಾಂಗಣದಲ್ಲಿ ಉಪಮುಖ್ಯಮಂತ್ರಿ, ಜಿಲ್ಲಾ‌ ಉಸ್ತುವಾರಿ ಸಚಿವ ಗೋವಿಂದ ಎಂ.ಕಾರಜೋಳ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯಿತು.

Advertisement

ಅಫಜಲಪುರ ಶಾಸಕ ಎಂ.ವೈ.ಪಾಟೀಲ, ಚಿಂಚೋಳಿ ಶಾಸಕ ಡಾ.ಅವಿನಾಶ್ ‌ಜಾಧವ್, ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ‌ಮತ್ತಿಮೂಡ, ಕಲಬುರ್ಗಿ ಉತ್ತರ ಶಾಸಕಿ ಕನೀಜ್ ಫಾತಿಮಾ, ಆಳಂದ ಶಾಸಕ ಸುಭಾಷ್ ಗುತ್ತೇದಾರ, ಸೇಡಂ ಶಾಸಕ ರಾಜಕುಮಾರ ‌ಪಾಟೀಲ ತೇಲ್ಕೂರ, ವಿಧಾನಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಬಿ.ಜಿ.ಪಾಟೀಲ, ಜಿ.ಪಂ. ಅಧ್ಯಕ್ಷೆ ಸುವರ್ಣ ‌ಮಲಾಜಿ, ಜಿಲ್ಲಾಧಿಕಾರಿ ಶರತ್ ಬಿ, ಜಿ.ಪಂ. ಸಿಇಒ ಡಾ.ರಾಜಾ ಪಿ, ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಐಎಫ್ಎಸ್ ಅಧಿಕಾರಿ ವಾನತಿ ಇದ್ದಾರೆ.

ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತ ಮಂದಿರದ ಅಭಿವೃದ್ಧಿಗಾಗಿ ₹ 10 ಕೋಟಿ ಅನುದಾನ ‌ಬಿಡುಗಡೆಯಾಗಿದ್ದು, ಯಾವ ಅಭಿವೃದ್ಧಿ ‌ಕಾರ್ಯಕ್ರಮ ಕೈಗೊಳ್ಳಬೇಕು ಎಂದು ನಿರ್ಧಾರ ಕೈಗೊಳ್ಳುವ ಸಭೆಗೆ ತಮ್ಮನ್ನು ಆಹ್ವಾನಿಸದೇ ಅವಮಾನ ಮಾಡಲಾಗಿದೆ ‌ಎಂದು ಶಾಸಕ ಎಂ.ವೈ.ಪಾಟೀಲ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಶಂಕುಸ್ಥಾಪನೆಗೆ ಖಂಡಿತ ಕರೆಯಲಾಗುತ್ತದೆ ಎಂದು ಹೇಳಿ ಸಚಿವರು ಶಿಷ್ಟಾಚಾರದ ಚರ್ಚೆಗೆ ತೆರೆ ಎಳೆದರು.

ಕಾಂಗ್ರೆಸ್ ಶಾಸಕ ಡಾ ಅಜಯ್ ಸಿಂಗ್ ಹಾಗೂ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ಸಭೆಗೆ ಗೈರು ಹಾಜರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next