Advertisement
ಶನಿವಾರ ಜಿಲ್ಲೆಯ ಪ್ರವಾಸದಲ್ಲಿರುವ ಜಲಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿಜಯಪುರ ಜಿಲ್ಲೆಯ ಪ್ರವಾಸದಲ್ಲಿದ್ದರು.ಸಂಜೆ ನಿಡಗುಂದಿ ತಾಲೂಕಿನ ಆಲಮಟ್ಟಿಯ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕರ ಕಚೇರಿಯಲ್ಲಿ ನೀರಾವರಿ ಯೋಜನೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದ್ದರು.ಈ ವೇಳೆ ರೈತ ಸಂಘಟನೆಗಳ ಮುಖಂಡರು ಜಿಲ್ಲೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿ ಹಾಗೂ ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಜಲಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲು ಮುಂದಾಗಿದ್ದರು.ಆದರೆ ಸ್ಥಳದಲ್ಲಿದ್ದ ಪೊಲೀಸರು ಉಪ ಮುಖ್ಯಮಂತ್ರಿ ಅವರ ಭೇಟಿಗೆ ಅವಕಾಶ ನೀಡಲಿಲ್ಲ. ಮತ್ತೊಂದೆಡೆ ಡಿ.ಕೆ.ಶಿವಕುಮಾರ ಸಹ ರೈತರ ಅಹವಾಲು ಆಲಿಸದೇ ಸಭೆ ಮುಗಿಸಿ, ಕಾರು ಏರಿ ಹೊರಡಲು ಮುಂದಾದರು.
Advertisement
ಮನವಿ ಸ್ವೀಕರಿಸದೇ ಹೋದ ಡಿಸಿಎಂ: ಬಾಯಿ ಬಡಿದುಕೊಂಡು ರೈತರ ಆಕ್ರೋಶ
09:01 PM Feb 03, 2024 | Vishnudas Patil |
Advertisement
Udayavani is now on Telegram. Click here to join our channel and stay updated with the latest news.