Advertisement
ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಇಂದು ಕಲಬುರ್ಗಿ, ವಿಜಯಪುರ, ಉಡುಪಿ, ಯಾದಗಿರಿ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದದಲ್ಲಿ ಮಾತನಾಡಿದರು.
Related Articles
Advertisement
ಪ್ರತಿ ಗ್ರಾಮ ಹಾಗೂ ನಗರಗಳಲ್ಲಿ ವಾರ್ಡ್ ಮಟ್ಟದಲ್ಲಿ ಕಾವಲು ಸಮಿತಿಗಳನ್ನು ರಚಿಸಬೇಕಲ್ಲದೆ, ಈ ಸಮಿತಿಗಳು ಕ್ರಿಯಾಶೀಲವಾಗಿದ್ದು, ಹೋಮ್ ಕ್ವಾರಂಟೈನ್ ಉಲ್ಲಂಘನೆಯಾದರೆ ಎಫ್.ಐ.ಆರ್ ದಾಖಲಿಸಬೇಕು ಎಂದು ನಿರ್ದೇಶಿಸಿದರು. ಗಡಿ ಭಾಗಗಳಿರುವ ಜಿಲ್ಲೆಗಳು ಕಟ್ಟುನಿಟ್ಟಾಗಿ ಗಡಿ ಪ್ರದೇಶಗಳನ್ನು ಕಾಯ್ದು, ಅಕ್ರಮ ಪ್ರವೇಶವನ್ನು ತಡೆಯಬೇಕು. ಮೃತ ದೇಹಗಳನ್ನು ಯಾವುದೇ ಕಾರಣಕ್ಕೂ ರಾಜ್ಯದೊಳಗೆ ತರದಂತೆ ನೋಡಿಕೊಳ್ಳಬೇಕೆಂದು ನಿರ್ದೇಶಿಸಿದರು.
ಎಸ್.ಎಸ್.ಎಲ್.ಸಿ / ಪಿ.ಯು.ಸಿ ಪರೀಕ್ಷಾ ದಿನಾಂಕಗಳು ನಿಗದಿಯಾಗಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ ಅಖ್ತರ್ ಹಾಗೂ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು.