Advertisement

ಡಿಡಿಪಿಐ, ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ

08:46 PM Jul 21, 2023 | Team Udayavani |

ಹಾವೇರಿ: ನಿವೃತ್ತ ಶಿಕ್ಷಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹಾಗೂ ಕಚೇರಿಯ ಸಿಬ್ಬಂದಿಯೊಬ್ಬರನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.

Advertisement

ಡಿಡಿಪಿಐ ಅಂದಾನಪ್ಪ ವಡಗೇರಿ ಮತ್ತು ಕೇಸ್ ವರ್ಕರ್ ದತ್ತಾತ್ರೇಯ ಕುಂಟೆ ಲೋಕಾಯುಕ್ತ ಬಲೆಗೆ ಬಿದ್ದವರು. ರಟ್ಟೀಹಳ್ಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಮಹಮ್ಮದ್ ಗೌಸ್ ಎಂಬವರು ತಮ್ಮ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಅಗತ್ಯ ದಾಖಲಾತಿಗಳನ್ನು ನೀಡಿ ಅದನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಲು ಕೋರಿದ್ದರು. ಅದಕ್ಕಾಗಿ ಡಿಡಿಪಿಐ 7 ಸಾವಿರ ರೂ, ಲಂಚ ಕೇಳಿದ್ದರು. ಶುಕ್ರವಾರ 7 ಸಾವಿರ ರೂ., ಲಂಚದ ಹಣ ಸ್ವೀಕರಿಸುತ್ತಿದ್ದಾಗ ಟ್ರ್ಯಾಪ್ ಮಾಡಲಾಗಿದೆ. ಇಬ್ಬರನ್ನೂ ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗುವುದು ಎಂದು ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next