Advertisement

ಬಂಟ್ವಾಳ : ನಾಪತ್ತೆಯಾಗಿದ್ದ ಮಹಿಳೆಯ ಶವ ನೇತ್ರಾವತಿ ನದಿಯಲ್ಲಿ ಪತ್ತೆ

11:13 AM Jul 13, 2020 | sudhir |

ಬಂಟ್ವಾಳ: ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಸಜೀಪಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಗೋಪಿ ಪೂಜಾರಿ(49) ಅವರ ಮೃತದೇಹ ಸೋಮವಾರ ತುಂಬೆ ಸಮೀಪ ನೇತ್ರಾವತಿ ನದಿಯಲ್ಲಿ ಸೋಮವಾರ ಪತ್ತೆಯಾಗಿದೆ.

Advertisement

ಕೆಲವು ದಿನಗಳ ಹಿಂದೆ ಬಿ.ಸಿ.ರೋಡಿನ ಚಿಕ್ಕಯ್ಯ ಮಠದಲ್ಲಿರುವ ಅಕ್ಕನ ಮನೆಗೆ ಬಂದಿದ್ದ ಮಹಿಳೆ ಜು. 11ರಂದು ಮುಂಜಾನೆ ನಾಪತ್ತೆಯಾಗಿದ್ದರು. ಬಳಿಕ ಪಾಣೆಮಂಗಳೂರು ಸೇತುವೆಯ ಸಮೀಪ ಮಹಿಳೆಯ ಶಾಲು ಹಾಗೂ ಬಳೆ ಪತ್ತೆಯಾದ ಹಿನ್ನೆಲೆಯಲ್ಲಿ ನದಿಗೆ ಹಾರಿದ್ದಾರೆ ಎಂದು ಹುಡುಕಾಟ ನಡೆಸಲಾಗಿತ್ತು ಆದರೂ ಮಹಿಳೆಯ ಸುಳಿವು ಸಿಕ್ಕಿರಲಿಲ್ಲ ಇಂದು ತುಂಬೆ ಸಮೀಪ ನದಿಯಲ್ಲಿ ಶವ ಪತ್ತೆಯಾಗಿದೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next