Advertisement

Dandeli: ಕೊಳೆತ ಸ್ಥಿತಿಯಲ್ಲಿ ಅವಿವಾಹಿತ ಮಹಿಳೆಯ ಮೃತದೇಹ ಪತ್ತೆ

03:48 PM Feb 02, 2024 | Team Udayavani |

ದಾಂಡೇಲಿ: ಇಲ್ಲಿನ ಗಣೇಶ ನಗರದ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಅವಿವಾಹಿತ ಮಹಿಳೆಯೋರ್ವರ ಮೃತದೇಹ ಫೆ.2 ಶುಕ್ರವಾರ ಪತ್ತೆಯಾಗಿದೆ.

Advertisement

ಮೃತ ಮಹಿಳೆ ಸಂಧ್ಯಾ ಶ್ರೀಪಾದ ಮಹಾಲೆ (36) ಎಂದು ಗುರುತಿಸಲಾಗಿದೆ.

ಈಕೆಯ ತಾಯಿ ಅನಾರೋಗ್ಯದ ಸಮಸ್ಯೆಯಿಂದಾಗಿ ಮಹಾರಾಷ್ಟ್ರದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿದ್ದರು. ಹಾಗಾಗಿ ಮಹಿಳೆ ಏಕಾಂಗಿಯಾಗಿ ಮನೆಯಲ್ಲಿ ವಾಸವಾಗಿದ್ದಳು. ಈಕೆಯ ಮನೆಯ ಸುತ್ತಮುತ್ತ ಕೊಳೆತ ವಾಸನೆ ಬರುತ್ತಿದ್ದ ಹಿನ್ನೆಲೆ ಸ್ಥಳೀಯರು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿರಬಹುದೆಂದು ಅಂದಾಜಿಸಲಾಗಿದೆ.

ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

Advertisement

ಈ ಬಗ್ಗೆ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next