Advertisement
ವಿಕಾಸಸೌಧದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೈಗೊಂಡಿರುವ ಕೆಲಸ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಈ ಬಾರಿ ಮಳೆಯ ಪರಿಣಾಮದಿಂದಾಗಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯೂ ಸೇರಿದಂತೆ ಹಲವು ಹೆದ್ದಾರಿಗಳಲ್ಲಿ ಗುಂಡಿಗಳು ನಿರ್ಮಾಣವಾಗಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಆದ್ದರಿಂದ ಹೆದ್ದಾರಿ ನಿರ್ವಹಿಸುವ ಅಧಿಕಾರಿಗಳು ತಕ್ಷಣ ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿ ಹೆದ್ದಾರಿಯ ಗುಣಮಟ್ಟವನ್ನು ಉತ್ತಮವಾಗಿ ಕಾಯ್ದುಕೊಂಡು ಹೋಗಲು ಸೂಕ್ತ ಕ್ರಮ ಕೈಗೊಳ್ಳಬೇಕು, ಇದಕ್ಕೆ ಅಗತ್ಯ ಸಹಕಾರವನ್ನು ರಾಜ್ಯ ಲೋಕೋಪಯೋಗಿ ಇಲಾಖೆಯಿಂದ ನೀಡಲಾಗುವುದು ಎಂದುರು.
Related Articles
ಹಾಸನ-ಮಂಗಳೂರು, ಬೆಂಗಳೂರು-ಬಿ.ಆರ್.ಹಿಲ್ಸ್, ಬೆಂಗಳೂರು-ಕನಕಪುರ ಹೆದ್ದಾರಿ ಕಾಮಗಾರಿಗಳು ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ ಎಂಬ ಬಗ್ಗೆ ಸಚಿವರು ಅತೃಪ್ತಿ ವ್ಯಕ್ತಪಡಿಸಿ, ಈ ಕಾಮಗಾರಿಗಳಿಗೆ ಇರುವ ಅಡೆತಡೆಗಳನ್ನು ನಿವಾರಿಸಿ ಆದಷ್ಟು ಶೀಘ್ರವಾಗಿ ಯೋಜನೆಗಳನ್ನು ಪೂರ್ಣಗೊಳಿಸಬೇಕೆಂದು ಸೂಚಿಸಿದರು.
Advertisement
ಹೆದ್ದಾರಿ ದುರಸ್ತಿ ಕಾರ್ಯವೊಂದೇ ಮುಖ್ಯವಲ್ಲ, ಹೆದ್ದಾರಿ ಅಕ್ಕ-ಪಕ್ಕದ ಹಳ್ಳಿಗಳಿಗೆ ಮತ್ತು ಪೇಟೆ-ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಲು ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಯು ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು. ವರ್ತುಲ ರಸ್ತೆಗಳ ಕಾಮಗಾರಿಗಳನ್ನು ವಿಳಂಬ ಮಾಡಿದರೆ ಆಯಾ ಪ್ರದೇಶಗಳ ನಗರಗಳ ಒಳಭಾಗದಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿ ಅಪಘಾತಗಳಿಗೆ ಎಡೆ ಮಾಡಿಕೊಟ್ಟಂತಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಕಾರ್ಯದರ್ಶಿ ಕೃಷ್ಣಾರೆಡ್ಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.