Advertisement

ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ;ಮತ್ತೆ ಅವಧಿ ವಿಸ್ತರಣೆ

12:29 PM Aug 30, 2017 | Sharanya Alva |

ನವದೆಹಲಿ:ಆಧಾರ್ ಗೆ ಸಂಬಂಧಪಟ್ಟ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ನವೆಂಬರ್ ಮೊದಲ ವಾರದಲ್ಲಿ ನಡೆಸುವುದಾಗಿ ಸುಪ್ರೀಂಕೋರ್ಟ್ ಬುಧವಾರ ತಿಳಿಸಿದೆ. ಸಾಮಾಜಿಕ ಹಾಗೂ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಡ್ಡಾಯ ಮಾಡುವ ಅವಧಿಯ ಗಡುವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.

Advertisement

ಸೆಪ್ಟೆಂಬರ್ 30ರ ಅಂತಿಮ ಗಡುವನ್ನು ಇನ್ನೂ 3 ತಿಂಗಳ ಕಾಲ ವಿಸ್ತರಿಸಿರುವುದಾಗಿ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಸುಪ್ರೀಂಗೆ ಮಾಹಿತಿ ನೀಡಿದರು. ಸರ್ಕಾರದ ಸುಮಾರು 30ಕ್ಕೂ ಅಧಿಕ ಯೋಜನೆಗಳಿಗೆ ಆಧಾರ್ ಕಡ್ಡಾಯ ಎಂದು ಕೇಂದ್ರ ಸರ್ಕಾರ ಹೇಳಿತ್ತು.

ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ, ಜಸ್ಟೀಸ್ ಅಮಿತವ್ ರಾಯ್ ಹಾಗೂ ಜಸ್ಟೀಸ್ ಎಎಂ ಖಾನ್ ವಿಲ್ಕರ್ ನೇತೃತ್ವದ ಪೀಠ ಆಧಾರ್ ಗೆ ಸಂಬಂಧಪಟ್ಟ ಅರ್ಜಿಗಳ ವಿಚಾರಣೆ ನಡೆಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next