Advertisement

ವಿಜಯಪುರದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು, ಇಬ್ಬರಿಗೆ ಗಂಭೀರ ಗಾಯ

08:34 PM Jul 16, 2021 | Team Udayavani |

ವಿಜಯಪುರ: ಲಾರಿ ಹಾಗೂ ಮಿನಿ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ವರು ಗಂಭೀರ ಗಾಯಗೊಂಡ ದುರಂತ ಘಟನೆ ಅರಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜು.16)  ಸಂಭವಿಸಿದೆ.

Advertisement

ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಅರಕೇರಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರಂತ ಸಂಭವಿಸಿದೆ.

ಮೃತರನ್ನು ಚಡಚಣ ತಾಲೂಕಿನ ಲೋಣಿ ಬಿ. ಕೆ. ಗ್ರಾಮದ ಶ್ರೀಶೈಲ ಮೇತ್ರಿ(40), ಬುದ್ದಯ್ಯ ಹಿರೇನಠ(45), ಪಿಂಟೂ ಹಿರೇಮಠ(25) ಎಂದು ಗುರುತಿಸಲಾಗಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ಪೊಲೀಸರು ಸ್ಥಳಾಂತರ ಮಾಡಿದ್ದಾರೆ.

ಘಟನೆಯಲ್ಲಿ ಸಿದ್ದಯ್ಯ ಹಿರೇಮಠ (22) ಸೇರಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಸಿಪಿಐ ಸಂಗಮೇಶ ಪಾಲಭಾವಿ, ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next