Advertisement

ಮಾತು ಬಾರದ, ಕಿವಿ ಕೇಳದ ಬಾಲಕಿಯ ಮೇಲೆ ಗ್ಯಾಂಗ್ ರೇಪ್

02:41 PM Oct 01, 2021 | Team Udayavani |

ಭೋಪಾಲ್:ಮಧ್ಯಪ್ರದೇಶದ ಶಾಡೊಲ್ ಎಂಬಲ್ಲಿ ಮಾತು ಬಾರದ, ಕಿವಿ ಕೇಳದ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ 6 ಮಂದಿ ಕಾಮುಕರು ಗ್ಯಾಂಗ್ ರೇಪ್ ನಡೆಸಿದ ರಾಕ್ಷಸೀ ಕೃತ್ಯ ಬೆಳಕಿಗೆ ಬಂದಿದೆ.

Advertisement

ನಾಲ್ವರು ಅಪ್ರಾಪ್ತ ವಯಸ್ಕರು ಸೇರಿ 6 ಮಂದಿ ಯುವಕರು ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಹೇಯ ಕೃತ್ಯ ನಡೆಸಿದ್ದು, ಮೊಬೈಲ್ ನಲ್ಲಿ ಚಿತ್ರೀಕರಿಸಿ ಹಂಚಿಕೊಂಡಿದ್ದಾರೆ.

ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸಂತ್ರಸ್ತ ಬಾಲಕಿಯ ತಂದೆಯ ಮೊಬೈಲ್ ಗೆ ಸ್ಥಳೀಯವಾಗಿ ಹರಿದಾಡುತ್ತಿದ್ದ ಫೋಟೊಗಳು ಬಂದಿದ್ದು ಈ ವೇಳೆ ಮಗಳ ಮೇಲಾದ ದೌರ್ಜನ್ಯದ ಕುರಿತು ತಿಳಿದು ಬಂದಿದೆ.

ಕೂಡಲೇ ಬಾಲಕಿಯ ತಾಯಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಕಾರ್ಯಾಚರಣೆ ನಡೆಸಿ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪರಿಣಿತರು ಘಟನೆಯ ಬಗ್ಗೆ ಬಾಲಕಿಯನ್ನು ಕೇಳಿದ್ದು, ಕೈ ಸನ್ನೆಯ ಮೂಲಕ ತನ್ನ ಮೇಲಾದ ಕೃತ್ಯವನ್ನು ಹೇಳಿಕೊಂಡಿದ್ದಾಳೆ. ಪೊಲೀಸರು ಆರೋಪಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next