Advertisement

ಕಾವೇರಿ ವಿಚಾರದಲ್ಲಿ ರಾಜಕೀಯ ಬಿಟ್ಟು ವ್ಯವಹರಿಸಿ

11:05 AM Jun 24, 2018 | |

ಬೆಂಗಳೂರು: ಕರ್ನಾಟಕವನ್ನು ಹೊರಗಿಟ್ಟು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸಲಾಗಿದೆ ಎಂಬ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಈ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ರಾಜ್ಯದ ಹಿತ ಕಾಪಾಡಲು ಗಮನಹರಿಸಿ ಎಂದು ಒತ್ತಾಯಿಸಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿರುವ ಅವರು, ಸುಪ್ರೀಂಕೋರ್ಟ್‌ ಆದೇಶದಂತೆ ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನೀರು ನಿಯಂತ್ರಣ ಸಮಿತಿಗಳನ್ನು ರಚಿಸಿದೆ. ಇದಕ್ಕೆ ಹೆಸರುಗಳನ್ನು ಶಿಫಾರಸು ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿದ್ದರೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿಲ್ಲ.

ಸರ್ಕಾರ ಹೆಸರು ಕಳುಹಿಸಿಕೊಡದೇ ಇದ್ದರೂ ಕೇಂದ್ರ ಸರ್ಕಾರ ಪ್ರಾಧಿಕಾರ ಮತ್ತು ಸಮಿತಿ ರಚಿಸಿ ಹೊರಡಿಸಿರುವ ಆದೇಶದಲ್ಲಿ ಅಧಿಕಾರಿಯ ಹುದ್ದೆಗಳನ್ನು ನಮೂದಿಸಲಾಗಿದೆ. ಇದರಿಂದ ರಾಜ್ಯವನ್ನು ಹೊರಗಿಡಲಾಗಿದೆ ಎಂಬ ಮುಖ್ಯಮಂತ್ರಿಗಳ ಆರೋಪ ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗುತ್ತದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next