ಹೊಸದಿಲ್ಲಿ: ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆಯ ದಿನವಾದ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವರು ನಮನ ಸಲ್ಲಿಸಿದರು.
ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮೃತಿ ಸ್ಥಳ ‘ ಸದೇವ್ ಅಟಲ್’ ನಲ್ಲಿ ಗಣ್ಯರು ನಮನ ಸಲ್ಲಿಸಿದರು.
ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಾಜಪೇಯಿ ಅವರ ಪುತ್ರಿ ನಮಿತಾ ಕೌಲ್ ಬಟ್ಟಾಚಾರ್ಯ, ಮೊಮ್ಮಗಳು ನಿಹಾರಿಕಾ ಅವರು ಸದೇವ್ ಅಟಲ್ ಗೆ ಆಗಮಿಸಿ ನಮನ ಸಲ್ಲಿಸಿದರು.
2018ರ ಆಗಸ್ಟ್ 16ರಂದು ಅಟಲ್ ಬಿಹಾರಿ ವಾಜಪೇಯಿ ಅವರು ತಮ್ಮ 93ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದರು. ಮೂರು ಬಾರಿ ದೇಶದ ಪ್ರಧಾನ ಮಂತ್ರಿ ಪಟ್ಟ ಅಲಂಕರಿಸಿದ್ದರು. ಭಾರತ ರತ್ನ ಪುರಸ್ಕಾರದಿಂದ ಗೌರವಿಸಲ್ಪಟ್ಟ ಅವರು ರಾಜಕೀಯದಲ್ಲಿ ಅಜಾತಶತ್ರು ಎಂದು ಹೆಸರಾಗಿದ್ದರು.