Advertisement

ಅಪಘಾತದಲ್ಲಿ ಕಾರು ಚಾಲಕ ಸಾವು

12:23 AM May 02, 2019 | Lakshmi GovindaRaj |

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕ ಹಾಗೂ ಪಕ್ಕದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣೆ ವ್ಯಪ್ತಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

Advertisement

ಕೆ.ಜಿ.ಹಳ್ಳಿ ನಿವಾಸಿ ತೌಸಿಫ್ (29) ಮೃತ ಚಾಲಕ. ತೌಸಿಫ್ ಬಾಗಲೂರು ರಸ್ತೆಯಿಂದ ಏರ್‌ಪೋರ್ಟ್‌ ಕಡೆ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದರು.

ಏರ್‌ಪೋರ್ಟ್‌ ಹಿಂಭಾಗದ ನವೋದಯ ಶಾಲೆ ಸಮೀಪ ತಡರಾತ್ರಿ 12.45ರ ಸುಮಾರಿಗೆ ಕಾರಿನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು, ಪಕ್ಕದಲ್ಲಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಚಿಕ್ಕಜಾಲ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next